ಕೆಎಸ್‍ಆರ್‍ಟಿಸಿ ಬಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲಿ ಸಾವು-ಇನ್ನಿಬ್ಬರ ಸ್ಥಿತಿ ಗಂಭೀರ
ಸಂಜೆವಾಣಿ ವಾರ್ತೆ
ಕೊಳ್ಳೇಗಾಲ.ಏ.5:- ಕೆಎಸ್‍ಆರ್‍ಟಿಸಿ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಕೊಳ್ಳೇಗಾಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮುಖ್ಯ ರಸ್ತೆಯ ಧನಗೆರೆ ಗ್ರಾಮದ ಹತ್ತಿರ ಸಂಭವಿಸಿದೆ.
ಆಟೋ ಡ್ರೈವರ್ ಸೈಯದ್ ಮನ್ಸೂರ್ ಹುಸೇನ್ (37) , ನೂರ್ ಜಾನ್ (56) , ಇಬ್ಬರು ಸ್ಥಳದಲ್ಲಿ ಮೃತ ಪಟ್ಟಿರುತ್ತಾರೆ.
ಸಂಸಾದ್ ಬೇಗಂ (45) ಈಕೆಯ ಒಂದು ಕಾಲು ತುಂಡರಿಸಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ.
ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ಸಂಬಂಧಿಕರನ್ನು ನೋಡಲು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ನಾಲ್ವರು ಒಂದೇ ಕುಟುಂಬದವರಾಗಿದ್ದು ಕೊಳ್ಳೇಗಾಲ ತಾಲೂಕಿನ ಹ್ಯಾಂಡ್ ಪೆÇೀಸ್ಟ್ ಶಿವನಸಮುದ್ರ ದರ್ಗದ ನಿವಾಸಿಗಳು ಎಂದು ತಿಳಿದುಬಂದಿದೆ.
ಈ ಅಪಘಾತ ಸಂಭವಿಸಿದ ತಕ್ಷಣ ಕೆಎಸ್‍ಆರ್‍ಟಿಸಿ ಬಸ್ ಚಾಲಕ ತಾನೇ ಬಂದು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೆÇಲೀಸ್ ಠಾಣೆಯ ಪಿಎಸ್‍ಐ ಗಣೇಶ್ ರವರು ವಿಷಯ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಮೃತ ದೇಹಗಳನ್ನು ವಾರಸುದಾರರಿಗೆ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.