ಚಿತ್ರದುರ್ಗ; ಹೆಲಿಕಾಪ್ಟರ್ ತಪಾಸಣೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೫: ಲೋಕಸಭಾ ಚುನಾವಣೆ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಯಾಣಿಸಿದ ಹೆಲಿಕಾಪ್ಟರ್‌ನ್ನು ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಧ್ಯಾಹ್ನ 12.45ರ  ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಎಂ.ಕೆ.ಹಟ್ಟಿ ಎಸ್.ಜೆ.ಎಂ.ಆAಗ್ಲ ಮಾಧ್ಯಮ ಶಾಲಾ ಅವರಣದ ಹೆಲಿಪ್ಯಾಡ್‌ಗೆ ಆಗಮಿಸಿದರು. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಧ್ಯಾಹ್ನ 1:30ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಜೆ.ಎಂ.ಐ.ಟಿ ಕ್ಯಾಂಪಸ್ ಆವರಣದ ಹೆಲಿಪ್ಯಾಡ್ ಆಗಮಿಸಿದರು.ಈ ವೇಳೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿ ಎಂ.ಕಾರ್ತಿಕ್ ಹಾಗೂ ಎಸ್.ಎಸ್.ಟಿ ತಂಡಗಳು ಹೆಲಿಕಾಪ್ಟರ್‌ನ್ನು ತಪಾಸಣೆ ಮಾಡಿದರು. ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಉಪ ತಹಶೀಲ್ದಾರ್ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು