ಎಲ್ಲರ ಮತ, ಪ್ರಜಾಪ್ರಭುತ್ವದ ಶಕ್ತಿ, ಮೇ.7 ರಂದು ತಪ್ಪದೇ ಮತಗಟ್ಟೆಗೆ ಬನ್ನಿ

ಸಂಜೆವಾಣಿ ವಾರ್ತೆ
ದಾವಣಗೆರೆ ಏ.೫; ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು.ಅವರು ಗುರುವಾರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಂದ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತಾನಾಡಿದರು. ಜಿಲ್ಲೆಯಲ್ಲಿ 16 ಲಕ್ಷ ಮತದಾರರಿದ್ದಾರೆ, 1693 ಮತಗಟ್ಟೆಗಳಿವೆ.  18 ವರ್ಷ ತುಂಬಿದ ಎಲ್ಲಾ ಮತದಾರರು ಮತದಾನ ಮಾಡಬೇಕು ಮತ್ತು ಎಲ್ಲರೂ ಪ್ರಜಾಪ್ರಭುತ್ವವನ್ನು ಬೆಳೆಸಬೇಕು, ಪ್ರತಿಯೊಬ್ಬರ ಮತದಾನವೂ ಅತ್ಯಮೂಲ್ಯವಾದದ್ದು, ಮತದಾನದ ದಿನ ಎಲ್ಲ ಯುವಕ, ಯುವತಿಯರು ಇದೇ ಉತ್ಸಾಹದಲ್ಲಿ ತಪ್ಪದೇ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು, ಇದನ್ನು ಚಲಾಯಿಸುವುದು ನಮ್ಮ ಕರ್ತವ್ಯ ಎಂದು ಮತದಾನ ಮಾಡಬೇಕು. ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು. ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ ಎಂದರು.