ಬೈಕ್ ಡಿಕ್ಕಿ: ವ್ಯಕ್ತಿ ಸಾವು
ಕಲಬುರಗಿ,ಸೆ.19-ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು 55 ರಿಂದ 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಆಳಂದ ರಸ್ತೆಯ ಕೆರೆ ಭೋಸಗಾ ಹತ್ತಿರ ನಡೆದಿದೆ.
ಮೃತ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಮಾಹಿತಿ ನೀಡಲು ಕೋರಲಾಗಿದೆ.