ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ
ಕಲಬುರಗಿ:ಏ.04: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಮೂರು ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯಿಂದ ಕಲುಷಿತ ನೀರು ಬರುತ್ತಿದ್ದು, ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ, ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.