ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ
ಕಲಬುರಗಿ:ಏ.04:ಇದೇ ಏಪ್ರಿಲ್ 9 ರಂದು ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂನಲ್ಲಿ ಜರುಗಲಿರುವ ರಥೋತ್ಸವಕ್ಕೆ ಆಗಮಿಸಲಿರುವ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವಿಭಾಗ-1 ರ ವತಿಯಿಂದ ಇದೇ ಏಪ್ರಿಲ್ 4 ರಿಂದ 11 ರವರೆಗೆ ಕಲಬುರಗಿ ಘಟಕ-1 ಮತ್ತು 4, ಚಿಂಚೋಳಿ, ಚಿತ್ತಾಪೂರ, ಕಾಳಗಿ ಹಾಗೂ ಸೇಡಂ ಘಟಕಗಳಿಂದ ಶ್ರೀಶೈಲಂಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.