ಕಾಂಗ್ರೆಸ್ ಕಾರ್ಯಕರ್ತನ ಕೊಲೆ
ಅಥಣಿ :ಏ.4: ತಾಲೂಕಿನ ಖೀಳೆಗಾಂವ ಗ್ರಾಮದ ಹೊರವಲಯದ ಖೀಳೆಗಾಂವ – ಅಥಣಿ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ನಡು ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಎರಡು ಬೈಕಿನಲ್ಲಿ ಬಂದ ಆರು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಅಣ್ಣಪ್ಪ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೊತೆಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಕಾಗವಾಡ ಶಾಸಕ ರಾಜು ಕಾಗೆ ಅವರ ಆಪ್ತ ಬಳಗದಲ್ಲಿ ಇವರು ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸ್ಥಳಕ್ಕೆ ಅಥಣಿ ಪೆÇಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು. ಅಥಣಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.