ನಾಳೆ ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸೋಣ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ. ಏ. 04: ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಡಾ|| ಬಾಬು ಜಗಜೀವನರಾಂ ಜಯಂತಿಯನ್ನು ಏಪ್ರಿಲ್ 5 ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಬುಧವಾರ ಡಾ|| ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವು ಡಾ|| ಬಾಬು ಜಗಜೀವನರಾಂ ಜಯಂತಿಯನ್ನು ಎಲ್ಲರೂ ಸೇರಿ ಆಚರಿಸೋಣ. ಎಲ್ಲಾ ಸರಕಾರಿ ಕಛೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಡಾ|| ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಏಪ್ರಿಲ್ 5 ರಂದು ಪೂಜೆ ಸಲ್ಲಿಸಬೇಕು. ನಗರಸಭೆ ವತಿಯಿಂದ ಜಗಜೀವನರಾಂ ಪುತ್ಥಳಿ ಸ್ವಚ್ಚತೆ ಮಾಡುವಂತೆ ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಏಪ್ರಿಲ್ 5 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಾ|| ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಬೀದರ ನಗರದಲ್ಲಿರುವ ಜಗಜೀವನರಾಂ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಎಲ್ಲರೂ ಸೇರಿ ಬೀದರ ಜಿಲ್ಲೆಯಲ್ಲಿ ಡಾ|| ಬಾಬು ಜಗಜೀವನರಾಂ ಜಯಂತಿಯನ್ನು ಯಶಸ್ವಿಯಾಗಿ ಆಚರಿಸೋಣ ಎಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ ಎಲ್ಲಾ ಜಯಂತಿಗಳ ಮೆರವಣಿಗೆಗಳು ಅಂಬೇಡ್ಕರ್ ವೃತ್ತದ ಮೂಲಕ ನಡೆಯಬೇಕು ಕೋರ್ಟ್ ಎದುರುಗಡೆಯಿಂದ ಹೋದರೆ ಡಿ.ಜೆ ಹಾಗೂ ಇತರೆ ಮೆರವಣಿಗೆ ಶಬ್ದದಿಂದ ಕೋರ್ಟ್ ಕಾರ್ಯಕಲಾಪಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾ ನ್ಯಾಯಾಧೀಶರು ನಮಗೆ ತಿಳಿಸಿರುತ್ತಾರೆ ಹಾಗಾಗಿ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಎಲ್ಲಾ ಜಯಂತಿಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸೋಣ ಮತ್ತು ಎಲ್ಲರೂ ಕಡ್ಡಾಯವಾಗಿ ಡಾ|| ಬಾಬು ಜಗಜೀವನರಾಂ ಜಯಂತಿಯನ್ನು ಎಲ್ಲಾ ಸರಕಾರಿ ಕಛೇರಿಯಲ್ಲಿ ಏಪ್ರೀಲ್ 5 ರಂದು ಆಚರಿಸಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಗಿರೀಶ್ ಬದೋಲೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಸಿಂಧು, ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ, ಜಗಜೀವನರಾಂ ಸಮಾಜದ ಮುಖಂಡರಾದ ಫನಾರ್ಂಡೀಸ್ ಹಿಪ್ಪಳಗಾಂ, ರೇವಿದಾಸ ಗೋಡೆ, ರಾಜು ಕಡ್ಯಾಳ, ಡಾ|| ಸುಧಾಕರ್ ಎಕಂಬಿಕರ್, ಮಾರುತಿ ಬೌದ್ದೆ, ರಮೇಶ ಕಟ್ಟಿ, ಬಸವರಾಜ ನಿರಣಾ, ವಿಜಯಕುಮಾರ ಸೋನಾರೆ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.