ತೀವ್ರ ಬರ ಹಿನ್ನೆಲೆ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ:ಜಿಲ್ಲಾಧಿಕಾರಿ ಡಾ. ಸುಶೀಲಾ .ಬಿ
ಯಾದಗಿರಿ:ಏ:4: ತೀವ್ರ ಬರ ಹಿನ್ನೆಲೆ ಜಿಲ್ಲೆಯಲ್ಲಿ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈಗಾಗಲೇ ತೀವ್ರ ಬರ ಪರಿಸ್ಥಿತಿಯನ್ನು ನಾವು ಎದುರಿಸುತ್ತಿದ್ದೇವೆ. ನೀರು ಪೆÇೀಲಾಗದಂತೆ ಲಭ್ಯ ಇರುವ ನೀರಿನ ಸಮರ್ಪಕ ನಿರ್ವಹಣೆ ಸೇರಿದಂತೆ ಅವಶ್ಯಕತೆ ಇರುವ ಮತ್ತು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಗುರುತಿಸಿ, ಮಾಲೀಕರೊಂದಿಗೆ ಎಸ್. ಡಿ. ಆರ್. ಎಫ್ ನಿಯಮಾವಳಿ ಅನ್ವಯ ಒಡಂಬಡಿಕೆ ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಿಕೊಳ್ಳಬೇಕು. ಟಾಸ್ಕ್ ಫೆÇೀರ್ಸ್
ಸಮಿತಿಯಲ್ಲಿ ಅನುಮೋದನೆ ಪಡೆದು ಕ್ರಮ ಕೈಗೊಳ್ಳಬೇಕು. ದುರಸ್ತಿ ಇರುವ ಪೈಪ್ಲೈನ್ ಗಳು ತಕ್ಷಣ ದುರಸ್ತಿಗೊಳಿಸಿ, ನೀರು ಪೆÇೀಲುಆಗದಂತೆ ಎಚ್ಚರಿಕೆವಹಿಸಬೇಕು. ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್ಸೆಟ್ ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸಿಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಸ್ಥಿತಿಯಲ್ಲಿ ಜನ ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅವರು ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆಯಾಗಬೇಕು. ನೀರು ಪೆÇೀಲಾಗದಂತೆ ತಡೆಯಲು ನೀರು ಬಿಡುವ ಸಮಯವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು. ಬರ ಘೋಷಣೆಯಾದ ಹಿನ್ನೆಲೆಯಲ್ಲಿ ಹೊಸದಾಗಿ ಬೋರ್ವೆಲ್ ಕೊರೆದು ನೀರು ಪೂರೈಸಲು ಚುನಾವಣಾ ಈ ಸಂದರ್ಭದಲ್ಲಿ ಯಾವುದೇ ಅಭ್ಯಂತರ ಇರುವುದಿಲ್ಲ. ಮುಂಬರುವ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯ ಇನ್ನೂ 329 ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ, ಈಗಿನಿಂದಲೇ ಖಾಸಗಿ ಬೋರ್ವೆಲ್ ಗುರುತಿಸುವ ಕಾರ್ಯ ಮಾಡಬೇಕು. ಬೋರ್ವೆಲ್ ಗುರುತಿಸಿದ ತಕ್ಷಣ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಬೇಕು. ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಪಡಿಸಿಕೊಂಡು, ಸಕಾಲಕ್ಕೆ ಬಿಲ್. ಸಂದಾಯ ಆಗುವಂತೆ ನೋಡಿಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು, ಕಿರುದಳ್ಳಿ ತಾಂಡ ಸೇರಿದಂತೆ ವಿವಿಧ ತಾಂಡಗಳಲ್ಲಿನ ಆರ್ಸೆನಿಕ್ ನೀರನ್ನು ಲ್ಯಾಬ್ ಪರೀಕ್ಷೆಗೆ ಒಳಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸದ್ಯ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿದ್ದು ,36 ಗ್ರಾಮಗಳಿಗೆ ಬಾಡಿಗೆ ಮೂಲಕ ಖಾಸಗಿ ಬೋರ್ವೆಲ್ ನೀರು ಪೂರೈಸಲಾಗುತ್ತಿದೆ. 28 ಗ್ರಾಮಗಳಿಗೆ ಹೊಸದಾಗಿ ಕೊಳವೆಬಾವಿ ಕೊರೆಯಿಸಿ ನೀರು ಪೂರೈಸಲಾಗುತ್ತಿದೆ. ಒಂದು ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಪೂರಿಸಲಾಗುತ್ತಿದ್ದು, ಗ್ರಾಮ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಅಧಿಕ ಉಷ್ಣಾಂಶದ ಹಿನ್ನೆಲೆಯ ಮುಂಜಾಗ್ರತೆಗೆ ಸೂಚನೆ: ಜಿಲ್ಲೆಯ ಲ್ಲಿ ಅಧಿಕ ಉಷ್ಣಾಂಶ ದ ಹಿನ್ನೆಲೆಯಲ್ಲಿ ಸಾರ್ವಜನಿಕ ರು ಅವಶ್ಯಕ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದು,ಮುಂದಿನ ಎರಡು ತಿಂಗಳು ಇನ್ನೂ ಹೆಚ್ಚು ಉಷ್ಣಾಂಶ ಹೆಚ್ಚಲಿದೆ.ಕಾರಣ ಬಿಸಿಲಿನಲ್ಲಿ ಓಡಾಡುವದನ್ನು ತೊರೆಯಬೇಕು. ಎಳನೀರು, ಜೂಸ್ ಲಿಕ್ವಿಡ್ ಮಾದರಿಯ ಪಾನೀಯಗಳನ್ನು ಸೇವಿಸಬೇಕು. ಆರೋಗ್ಯ ಕ್ಕೆ ವಿಶೇಷ ಗಮನ ನೀಡಬೇಕು.ಆರೋಗ್ಯ ದಲ್ಲಿ ಏರು ಪೇರಾದಲ್ಲಿ ತಕ್ಷಣ ಆರೋಗ್ಯ ಕೇಂದ್ರ, ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯಲು ಅವರು ತಿಳಿಸಿದ್ದಾರೆ. ಜಿ.ಪಂ.ಸಿಇಓ ಗರಿಮಾ ಪನ್ವಾರ್ ಉಪಸ್ಥಿತರಿದ್ದರು.