ಸಿಂದಗಿ ತಾಲೂಕಿನ ಯಂಕಂಚಿಯಲ್ಲಿ ಆಲಗೂರ ಪ್ರಚಾರ ಸಭೆ
ಸಂಜೆವಾಣಿ ವಾರ್ತೆ,
ವಿಜಯಪುರ, ಏ.4:ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿ ರಾಜು ಆಲಗೂರ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಜನರ ವಿಶ್ವಾಸ ಉಳಿಸಿಕೊಂಡು ಬಂದಿದೆ. ಕಾಂಗ್ರೆಸ್ ಈ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದರು.
ಶಾಸಕÀ ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ, ಜಿಪಂ ಮಾಜಿ ಅಧ್ಯಕ್ಷ ಮಲ್ಲಣ್ಣ ಸಾಲಿ, ರವಿರಾಜ ದೇವರಮನಿ, ಗುರಣ್ಣ ಬಿರಾದಾರ, ವೈ.ಟಿ. ನಾಯ್ಕೋಡಿ, ಮಹಾಂತಗೌಡ ಪಾಟೀಲ, ರಮೇಶ ಗುಬ್ಬೇವಾಡಿ, ವೈ.ಸಿ. ಮಯೂರ, ಸುರೇಶ ಪೂಜಾರಿ, ರಾಜಶೇಖರ ಕೂಚಬಾಳ, ಸುರೇಶ ಮಳ್ಳಿ ಸೇರಿದಂತೆ ಅನೇಕರು ಇದ್ದರು.