ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ
ಸಂಜೆವಾಣಿ ವಾರ್ತೆ,
ವಿಜಯಪುರ,ಏ..4: ವಿಜಯಪುರ ಲೋಕಸಭಾ ಚುನಾವಣೆ ಕುರಿತು ವಿಜಯಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆಯಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿತ್ತು. ಅದರಂತೆ ನುಡಿದಂತೆ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ವಿಶೇಷವಾಗಿ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಎಲ್ಲ ವರ್ಗದ ಜನಾಂಗಕ್ಕೂ ಕಾಂಗ್ರೆಸ್ ಪಕ್ಷದ ಸರ್ಕಾರ ಕೊಡುಗೆ ನೀಡಿದೆ. ಈ ಯೋಜನೆಗಳ ಸದುಪಯೋಗಪಡಿಸಿಕೊಂಡ ಫಲಾನುಭವಿಗಳಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಕೊಡುಗೆ ಸ್ಮರಿಸುವಂತಾಗಬೇಕು ಎಂದರು.
ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮತ್ತು ತಾಲೂಕಾ ಅಧ್ಯಕ್ಷರು, ಸದಸ್ಯರು ಶ್ರಮಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸಾಹೇಬಗೌಡ ಬಿರಾದಾರ, ಶಬ್ಬೀರ ಜಾಗೀರದಾರ, ಬಾಪುಗೌಡ ಪಾಟೀಲ, ಮಹಾದೇವಿ ಗೋಕಾಕ, ಸದ್ದಾಂ ಕುಂಟೋಜಿ ಮುಂತಾದವರು ಮಾತನಾಡಿದರು.
ಈ ಸಭೆಯಲ್ಲಿ ಜಯಶ್ರೀ ಭಾರತೆ, ರಾಜೇಶ್ವರಿ ಚೋಳಕೆ, ಅಮಿತ ಚವ್ಹಾಣ, ನಿಂಗಪ್ಪ ಸಂಗಾಪೂರ, ಸಣ್ಣಪ್ಪ ತಳವಾರ, ರಾಮನಗೌಡ ಬಗಲಿ, ರವಿದಾಸ ಜಾಧವ, ಶಿವಶಂಕರಗೌಡ ಹಿರೇಗೌಡರ, ಸಂಗಮೇಶ ದೇಸಾಯಿ, ಸತೀಶ ನಾಯಕ, ಆನಂದ ಜಾಧವ, ವಸಂತ ಹೊನಮೊಡೆ ಮುಂತಾದವರು ಉಪಸ್ಥಿತರಿದ್ದರು.