ನಗರದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಲು ಸೂಚನೆ
ಕಲಬುರಗಿ,ಏ.03:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ನೀರಿನ ಮೂಲಗಳಾದ ಭೀಮಾ ನದಿ ಹಾಗೂ ಬೆಣ್ಣೆತೋರಾ ನದಿನಗಳಲ್ಲಿ ಪ್ರತಿದಿನ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಆದ್ದರಿಂದ ನಗರದ ಸಾರ್ವಜನಿಕರು ಅನಾವಶ್ಯಕವಾಗಿ ರಸ್ತೆ ಹಾಗೂ ವಾಹನ ತೊಳೆಯಬಾರದು ಮತ್ತು ನೀರು ಪೋಲಾಗದಂತೆ ನೋಡಿಕೊಳ್ಳಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಸಿ-ಕೆಯುಐಡಿಎಫ್‍ಸಿ ಯೋಜನಾ ಘಟಕದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
ಕಲಬುರಗಿ ನಗರದಲ್ಲಿ ನೀರಿನ ಕೊರತೆ ಇರುವುದರಿಂದ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ ಮೂಲಕ ನಗರದ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದ್ದು, ಗ್ರಾಹಕರು ಟ್ಯಾಂಕರ್ ಮೂಲಕ ಬಂದಂತಹ ನೀರನ್ನು ತಮ್ಮ ಮನೆಯಲ್ಲಿನ ಸಂಪಿನಲ್ಲಿ ತುಂಬಿಸಿಕೊಳ್ಳಬಾರದು ಹಾಗೂ ಎಲ್ಲರಿಗೂ ಸರಿ ಸಮಾನವಾಗಿ ನೀರು ಸಿಗುವಂತೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.