ಪ್ರಾಣಿ ಸಂಕುಲಗಳ ಸಂರಕ್ಷಣೆ ಅಗತ್ಯ
ಕಲಬುರಗಿ:ಅ.04:ಪರಿಸರ ಸಮತೋಲನಗೆ ಪ್ರಾಣಿಗಳು, ಪಕ್ಷಿಗಳು, ಸಸ್ಯಗಳು ಸೇರಿದಂತೆ ಎಲ್ಲಾ ನೈಸರ್ಗಿಕ ಸಂಪತ್ತುಗಳು ಅವಶ್ಯಕವಾಗಿವೆ. ಮಾನವ ಪರಿಸರದ ಮೇಲೆ ದಬ್ಬಾಳಿಕೆ ಮಾಡುವ ಮೂಲಕ ಪ್ರಾಣಿಗಳಿಗೆ ಹಿಂಸೆ ನೀಡುತ್ತಿದ್ದಾನೆ. ಪ್ರಾಣಿಗಳನ್ನು ಹಿಂಸಿಸುವುದು, ಬೇಟೆಯಾಡುವುದು ಕಾನೂನು ರೀತಿಯಿಂದ ಅಪರಾಧವಾಗಿದೆ. ಪ್ರಾಣಿ ಸಂಕುಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಜೆ.ಆರ್ ನಗರದಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವಿಶ್ವ ಪ್ರಾಣಿ ಕಲ್ಯಾಣ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿವಿಧ ಪ್ರಾಣಿಗಳು ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪರಿಸರ ಸ್ಥಿತಿಯ ಪ್ರಮುಖ ಸೂಚಕಗಳು. ಪ್ರಕೃತಿಯಯ ಸಮತೋಲನ ಭಾಗವಾಗಿವೆ. ಅರಣ್ಯ ನಾಶ, ಜೀವ ವೈವಿಧ್ಯತೆಯಲ್ಲಿ ಏರು-ಪೇರು, ಜಾಗತಿಕ ತಾಪಮಾನ, ಬೇಟೆ ಸೇರಿದಂತೆ ಮುಂತಾದ ಕಾರಣಗಳಿಂದ ಇಂದು ಅನೇಕ ಪ್ರಾಣಿಗಳಿಗೆ ತೊಂದರೆಯಾಗಿದೆ. ಆದ್ದರಿಂದ ಪ್ರಾಣಿ ಸಂಕುಲವನ್ನು ಸಂರಕ್ಷಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಶಿಕ್ಷಕಿಯರಾದ ಐಶ್ವರ್ಯ ಬಿರಾದಾರ, ಪೂಜಾ ಜಮಾದಾರ ಹಾಗೂ ವಿದ್ಯಾರ್ಥಿಗಳಿದ್ದರು.