ತಾಲೂಕು ಮಟ್ಟದ ಕಾರ್ಯಾಗಾರ ಉದ್ಘಾಟನೆ
ಕಲಬುರಗಿ:ಅ.04:ಜೇವರ್ಗಿ ತಾಲೂಕಾ ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಜಿಲ್ಲಾ ಬಾಲಕಾರ್ಮಿಕರ ಸೊಸೈಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗದಾತರಿಗೆ, ಉದ್ಯೋಗದಾತರ ಸಂಘಟನೆಗಳಿಗೆ ಮತ್ತು ಸಂಘಟಿತ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುμÁ್ಠನಗೊಳುತ್ತಿರುವ ವಿವಿಧ ಯೋಜನೆಗಳ ಕುರಿತು ಮತ್ತು ವಿವಿಧ ಕಾರ್ಮಿಕ ಕಾಯ್ದೆಗಳ ಕುರಿತು ತಾಲೂಕು ಮಟ್ಟದ ಕಾರ್ಯಾಗಾರವನ್ನು ಜೇವರ್ಗಿಯ ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಜೇವರ್ಗಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಸಂದೀಪ ನಾಯಿಕ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು.
ಕಾರ್ಯಾಗಾರದಲ್ಲಿ ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಶರಣಪ್ಪ ಹಳಿಮನಿ ಅಧ್ಯಕ್ಷತೆವಹಿಸಿದರು. ಜೇವರ್ಗಿ ತಹಶೀಲ್ದಾರ ಮಲ್ಲಣ್ಣ ಯಲಗೋಡ, ಕಲಬುರಗಿ 3ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್. ಪ್ರಸನ್ನ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಸಿಬ್ಬಂದಿ ವರ್ಗಗಳು ಉಪಸ್ಥಿತರಿದ್ದರು.