ಪೆಟ್ರೋಲ್ ಪಂಪ್ ಮಾಲೀಕ ಆತ್ಮಹತ್ಯೆ
ಕಲಬುರಗಿ,ಏ.3-ನಗರದ ಹೀರಾಪೂರ ಹತ್ತಿರವಿರುವ ಹೆಚ್.ಪಿ.ಪೆಟ್ರೋಲ್ ಪಂಪ್ ಮಾಲೀಕ ನಟರಾಜ ರೆಡ್ಡಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಓಝಾ ಲೇಔಟ್‍ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 5-6 ವರ್ಷಗಳಿಂದ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಏ.1 ರಂದು ಮಧ್ಯಾಹ್ನ ಪೆಟ್ರೋಲ್ ಬಂಕ್‍ಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಸಾಯಂಕಾಲ ಮನೆಗೆ ಬಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ಕಲಾವತಿ ರೆಡ್ಡಿ ಅವರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.