ಮತದಾನ ಜಾಗೃತಿಗಾಗಿ ವಾಕ್ ಥಾನ್
ಔರಾದ್ :ಏ.3: ಲೋಕಸಭಾ ಚುನಾವಣೆ ಅಂಗವಾಗಿ ಔರಾದ್ ತಾಲೂಕಿನ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗುತ್ತಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಜಿಲ್ಲಾಡಳಿತ, ಪೆÇಲೀಸ್ ಇಲಾಖೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ಬೆಳಿಗ್ಗೆ ಮತದಾನ ಜಾಗೃತಿ ಮ್ಯಾರಥಾನ್ ಜರುಗಿತು.
ಪಟ್ಟಣದ ಕನ್ನಡಾಂಬೆ ವೃತ್ತದಿಂದ ತಹಸೀಲ್ ಕಚೇರಿಯವರೆಗೆ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು. ಮ್ಯಾರಥಾನನಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪೆÇೀಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ತಹಸೀಲ್ದಾರ ನಾಗಯ್ಯ ಹಿರೇಮಠ, ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಸುಮಾರು ಜನ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಔರಾದ್, ಕಮಲನಗರ ಕ್ಷೇತ್ರದ ವ್ಯಾಪ್ತಿಯ ಕಡಿಮೆ ಮತದಾನವಾಗುವ ಪ್ರದೇಶದಲ್ಲಿ ಮತದಾನ ಹೆಚ್ಚಿಸುವ ಉದ್ದೇಶದಿಂದ ಮ್ಯಾರಥಾನ್ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ, ಔರಾದ್-ಕಮಲನಗರ ಸೇರಿ ಒಟ್ಟು ಕ್ಷೇತ್ರದಲ್ಲಿ 255 ಮತಗಟ್ಟೆಗಳಿದ್ದು, ಇವಿಎಂ ಯಂತ್ರ ಸೇರಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನಲ್ಲಿ 51 ಸೂಕ್ಷ್ಮ ಮತಗಟ್ಟೆಗಳಿವೆ. ಸಿಸಿಟಿವಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು. ಮತಗಟ್ಟೆಯಲ್ಲಿ ವಿದ್ಯುತ್, ನೀರು, ಊಟ ವ್ಯವಸ್ಥೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ, ಔರಾದ್-ಕಮಲನಗರ ತಾಲೂಕು ಸೇರಿ ಒಟ್ಟು 2,24,304 ಮತದಾರರಿದ್ದಾರೆ. ಈ ಪೈಕಿ 1,16,089 ಪುರುಷ ಮತದಾರರು, 1,08,215 ಮಹಿಳಾ ಮತದಾರರಿದ್ದಾರೆ. ಔರಾದ್ ತಾಲೂಕಿನಲ್ಲಿ 149, ಕಮಲನಗರ ತಾಲೂಕಿನಲ್ಲಿ 106 ಮತಗಟ್ಟೆಗಳಿವೆ ಎಂದರು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಎಲ್ಲ ಇಲಾಖೆಗಳ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.