ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಅನ್ ಗ್ಯಾರಂಟಿ ಸರ್ಕಾರ; ಗಾಯತ್ರಿ ಸಿದ್ದೇಶ್ವರ್

ಸಂಜೆವಾಣಿ ವಾರ್ತೆ
ದಾವಣಗೆರೆ.ಏ.೩ : ಕಾಂಗ್ರೆಸ್ ಸರ್ಕಾರ ಪುಕ್ಕಟೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ಅಭಿವೃದ್ಧಿ ಎಂಬುದನ್ನೇ ಮರೆತಿದೆ. ಗ್ಯಾರಂಟಿ ಕೊಡುತ್ತೇವೆ ಎಂಬ ನೆಪದಲ್ಲಿ 10 ತಿಂಗಳಿನಿಂದ ನಮ್ಮ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲೇ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಎಂದು ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರದ ವಾಹನದಲ್ಲಿ ಮತ್ತು ಕೀ ವೋಟರ್ಸ್ ಮನೆಗಳಿಗೆ ತೆರಳಿ ಮತಬೇಟೆ ಮಾಡಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಅನ್ ಗ್ಯಾರಂಟಿ ಸರ್ಕಾರ ನಡೆಸುತ್ತಿದ್ಧಾರೆ. ಸ್ವಪಕ್ಷೀಯ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ನಡೆದುಕೊಂಡು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ಧಾರೆ ಎಂದರು.ದೇಶದ ಅಭಿವೃದ್ಧಿ, ಸುರಕ್ಷತೆ, ಸಾಕ್ಷಾರತೆ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕು ಅಂದರೆ ದಾವಣಗೆರೆಯಿಂದ ನೀವು ನನ್ನನ್ನು ಆಯ್ಕೆ ಮಾಡಿ ದೆಹಲಿಗೆ ಕಳುಹಿಸಬೇಕು ಎಂದರು.ದೂಡ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸ್ ಕರಿಯಪ್ಪ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್, ಜಿ.ಎಸ್.ಅಶ್ವಿನಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗ್ಯಮ್ಮ, ಕೊಳೇನಳ್ಳಿ ಸತೀಶ್, ಸೋಗಿ ಶಾಂತಕುಮಾರ್, ಜಯಮ್ಮ, ಪ್ರೇಮಮ್ಮ ಮತ್ತಿತರರು ಇದ್ದರು.