ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಬೆಂಬಲಿಸಲು ದಿನೇಶ್ ಕೆ.ಶೆಟ್ಟಿ ಕರೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಏ.೩: ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಿಸುವ ಅಜೆಂಡಾವನ್ನು ಇಟ್ಟುಕೊಂಡಿರುವ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕಿದ್ದು, ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಕರೆ ನೀಡಿದರು. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಜಗತ್ತಿನಲ್ಲಿ ಭಾರತಕ್ಕೆ ಇತಿಹಾಸವಿದ್ದು, ಇಂತಹ ರಾಷ್ಟçದಲ್ಲಿ ಕೋಮುವಾದಿತ್ವ ತಂದು ಸಂವಿಧಾನವನ್ನು ಬದಲಿಸಲು ಹೊರಟಿರುವ ಬಿಜೆಪಿ ಪಕ್ಷದ ಅಧಿಕಾರ ಸರ್ವಾಧಿಕಾರ ಧೋರಣೆ ಮಾಡುತ್ತಿದ್ದು, ಇಂತಹ ಸರ್ಕಾರವನ್ನು ಬದಲಿಸುವ ಕಾಲ ಬಂದಿದ್ದು, ಜಾತ್ಯಾತೀತ ನಿಲುವನ್ನು ಹೊಂದಿರುವವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿಯ ದಾವಣಗೆರೆ ಜಿಲ್ಲಾಧ್ಯಕ್ಷ ವಕೀಲರಾದ ಎಸ್. ಪರಮೇಶ್ ಅವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನ ಹಿತವನ್ನು ರಾಜ್ಯ ಸರ್ಕಾರ ಕಾಪಾಡಿದೆ. ಹಾಗೂ ಪ್ರಭಾ ಮಲ್ಲಿಕಾರ್ಜುನ್ ಅವರು ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಜನಸಾಮಾಣ್ಯರಿಗೆ ಅನುಕೂಲವಾಗಲು ಬಡ ಮಕ್ಕಳಿಗೆ ಶಿಷ್ಯವೇತನ , ಉಚಿತವಾಗಿ ಆರೋಗ್ಯ ಶಿಬಿರಗಳನ್ನು ನಡೆಸಿದ್ದು, ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಕರೆ ನೀಡಿದರು
ವಕೀಲರಾದ ಬಿ.ಎಂ.ಹನುಮAತಪ್ಪ, ಕಂಚಿಕೇರಿ ಮಂಜಪ್ಪ, ಡೋಲಿ ಚಂದ್ರು ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಶುಭಮಂಗಳ, ಮಹಿಳಾ ಕಾಂಗ್ರೆಸ್‌ನ ಮಂಗಳಮ್ಮ, ಮಹ್ಮದ್ ಇಸ್ಮಾಯಿಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.ಈ ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿಯ ಪ್ರಧಾನ ಕರ‍್ಯದರ್ಶಿ ಕವಿತಾ ಚಂದ್ರಶೇಖರ್, ಅರುಣಕುಮಾರ್, ಮಹ್ಮದ್ ಇಮ್ತಿಯಾಜ್, ಜಿಲ್ಲಾ ಉಪಾಧ್ಯಕ್ಷರಾದ ತಿಪ್ಪೇಶಪ್ಪ ಹಾಗೂ ಮಂಜಪ್ಪ ಮತ್ತಿತರರಿದ್ದರು.