ವಿಸಿ ಕಪ್ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆ
ಕಲಬುರಗಿ:ಏ.3:ಡಾ. ಬಾಬಾ ಸಾಹೇಬ್ ಭೀಮರಾವ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ನಿಮಿತ್ಯವಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿರುವ ವಿಸಿ ಕಪ್ ಕ್ರಿಕೆಟ್ ಟೂರ್ನಾಮೆಂಟ್ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ, ದಯಾನಂದ ಅಗಸರ್ ಅವರು ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಟೂರ್ನಾಮೆಂಟ್ ವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಾದ ಡಾ. ಎಚ್. ಎಸ್. ಜಂಗೆ, ಡಾ. ಎನ್. ಜಿ. ಕಣ್ಣೂರ, ಡಾ. ವಿಶಾಲ ಸಜ್ಜನ, ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರವಿ, ಶಿವು, ಆನಂದ ಯಾತನೂರ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.