ಪೂರ್ವಭಾವಿ ಸಭೆ
ಲಕ್ಷ್ಮೇಶ್ವರ,ಏ3 ಇಲ್ಲಿನ ತಹಶೀಲ್ದಾರರ ಕಾರ್ಯಾಲಯದಲ್ಲಿ ಏಪ್ರಿಲ್5 ರಂದು ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿ ಮತ್ತು ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ವಾಸುದೇವ್ ವಿ ಸ್ವಾಮಿಯವರು ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಯಲ್ಲಿ ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಕಾರ್ಯಾಲಯದಲ್ಲಿ ಏಪ್ರಿಲ್5 ರಂದು ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಹಾಗೂ ಏಪ್ರಿಲ್ 14ರಂದು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆರೋಗ್ಯ ಇಲಾಖೆ ಲೋಕೋಪಯೋಗಿ ಇಲಾಖೆ ಉಪ ನೊಂದಣಿ ಅಧಿಕಾರಿಗಳ ಇಲಾಖೆ ಆರ್ ಡಿ ಪಿ ಆರ್ ಸೇರಿದಂತೆ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.