ಮೇಣದಬತ್ತಿ-ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ
ಬಾಗೇಪಲ್ಲಿ.ಏ೩:ಬಾಗೇಪಲ್ಲಿ ತಾಲ್ಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ (ಓಊ-೭) ಚೆಕ್ ಪೋಸ್ಟ್ ಗೆ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಒಅಅ ನೋಡಲ್ ಅಧಿಕಾರಿ ಹೇಮಾವತಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಘಂಟಂವಾರಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಕೊರ್ಲಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರ್ಲಪರ್ತಿ ಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ- ೨೦೨೪ ರ ಅಂಗವಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಂಗನವಾಡಿ ಮೇಲ್ವಿಚಾರಕರಿಗೆ, ಆಶಾ ಕಾರ್ಯಕರ್ತರಿಗೆ, ಶಾಲಾ ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಬಣ್ಣ ಬಣ್ಣ ರಂಗೋಲಿಗಳ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.ಈ ಸಂದರ್ಭದಲ್ಲಿ ಬಾಗೇಪಲ್ಲಿ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್, ಗುಡಿಬಂಡೆ ತಹಶೀಲ್ದಾರ್ ಮನಿಷಾ ರವರು,ಕಾರ್ಯನಿರ್ವಾಹಣಾಧಿಕಾರಿ ಆರ್. ಹೇಮಾವತಿ, ತಾಲ್ಲೂಕಿನ ಎಲ್ಲಾ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ರವರು ಸೇರಿದಂತೆ ಉಪಸ್ಥಿತರಿದ್ದರು.
ಬಾಗೇಪಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಬಾಗೇಪಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯವರು ಸೋಮವಾರ ಸಂಜೆ ಬಾಗೇಪಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಪ್ರದರ್ಶಿಸುವ ಮೂಲಕ ಸಮಾಜಿಕ ಜಾಲತಾಣಗಳಲ್ಲಿ ಮತದಾರರು ಮಾಹಿತಿ ಪಡೆಯುವ ವಿ.ಎಚ್.ಎ ಆಪ್ ಬಗ್ಗೆ ಜಾಗೃತಿ ಮೂಡಿಸಿದರು ಮತ್ತು ಮೇಣದಬತ್ತಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಸಿದರು. ಈ ವೇಳೆ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ನೆರೆದಿದ್ದವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ಹದಿನೆಂಟು ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಮತದಾನ ಹಾಕುವುದು ನಮ್ಮ ನಿಮ್ಮೆಲ್ಲರ ಹಕ್ಕು. ಯಾರೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ , ಗ್ರಾಮ ಪಂಚಾಯತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ತಾಲ್ಲೂಕು ಪಂಚಾಯತಿ ಸಿಬ್ಬಂದಿ ಇದ್ದರು. ಮತದಾನದ ಬಗ್ಗೆ ಅರಿವು ಮೂಡಿಸಿದರು.