ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ವಿರುದ್ಧ ದೂರು ದಾಖಲು
ಸಂಜೆವಾಣಿ ವಾರ್ತೆ
ಹನೂರು.ಏ.03- ಹನೂರು ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ಗೂಂಡಾ, ರೌಡಿ ಎಂದು ಉಲ್ಲೇಖಿಸಿ ನೀಡಿದ್ದ ಹೇಳಿಕೆ ಸಂಬಂಧ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿರುವ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್ ಕೊಡಲಾಗಿದೆ. ಸಹಾಯಕ ಚುನಾವಣಾಧಿಕಾರಿ, ಮಾದರಿ ನೀತಿ ಸಂಹಿತೆ ನೂಡಲ್ ಅಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ವರದಿ ಪಡೆದು ನೋಟಿಸ್ ಜಾರಿಗೊಳಿಸಲಾಗಿದೆ.
ಕಳೆದ 28 ರಂದು ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಓರ್ವಗೂಂಡಾ, ರೌಡಿ, ಗುಜರಾತ್‍ನಲ್ಲಿ ನರಮೇಧ ಮಾಡಿದ ಆರೋಪ ಹೊತ್ತಿದ್ದಾರೆ, ದೇಶದ ಉನ್ನತ ಸ್ಥಾನದಲ್ಲಿದ್ದು ಇಂತವರನ್ನ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದರು.
ಈ ಸಂಬಂಧ ಬಿಜೆಪಿ ಬೆಂಗಳೂರಿನಲ್ಲಿ ದೂರು ದಾಖಲು ಮಾಡಿತ್ತು. ಈ ಹಿನ್ನೆಲೆಯಲ್ಲಿ ಯತೀಂದ್ರಗೆ ಚಾಮರಾಜನಗರ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದಾರೆ.
ಪೆÇಲೀಸರಿಗೆ ದೂರು ಕೊಟ್ಟ ಚುನಾವಣಾಧಿಕಾರಿಗಳು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮಾಜಿ ಶಾಸಕ ಯತೀಂದ್ರ ವಿರುದ್ಧ ಫ್ಲೈಯಿಂಗ್ ಸ್ಕಾಡ್ ತಂಡ ಹನೂರು ಪೆÇಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.
ಏ.1 ರಂದು ಫ್ಲೈಯಿಂಗ್ ಸ್ಕಾಡ್ ತಂಡದ ಗುಂಡುರಾವ್ ಎಂಬವರು ಹನೂರು ಠಾಣೆಗೆ ದೂರುಕೊಟ್ಟು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಅವಹೇಳನಕಾರಿಯಾಗಿ ಭಾಷಣ ಮಾಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಕೊಟ್ಟಿದ್ದಾರೆ.
ಈ ಸಂಬಂಧ ಬಿಜೆಪಿ ಬೆಂಗಳೂರಿನಲ್ಲಿ ದೂರು ದಾಖಲು ಮಾಡಿತ್ತು. ಯತೀಂದ್ರಗೆ ಚಾಮರಾಜನಗರ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದಾರೆ, ಈಗ ಹನೂರು ಪೆÇಲೀಸ್ ಠಾಣೆಯಲ್ಲಿ ದೂರು ಕೂಡದಾಖಲಾಗಿದೆ.