ಪೆÇಲೀಸ್ ಸೇವೆ ಸ್ಮರಣೀಯ: ಟಿ.ಭೂಬಾಲನ್
ಸಂಜೆವಾಣಿ ವಾರ್ತೆ
ವಿಜಯಪುರ ಏ.3: ಪೆÇಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಪೆÇಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪೆÇಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೆÇಲೀಸ್ ಇಲಾಖೆ ಶ್ರಮಿಸುವದರಿಂದ ಪೆÇಲೀಸ್ ಸೇವೆ ಸ್ಮರಣೀಯವಾಗಿದೆ ಎಂದರು.
ನಿವೃತ್ತರಾಗಿರುವ ಪೆÇಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಗೌರವಿಸುವುದಸುವುದಕ್ಕಾಗಿಯೇ ಪೆÇಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಆಚರಿಸಲಾಗುತ್ತದೆ. ನಿವೃತ್ತರಾದವರಿಗೆ ಸಮಸ್ಯೆಗಳು ಏನಾದರೂ ಇದ್ದಲ್ಲಿ ಜಿಲ್ಲಾಡಳಿತವನ್ನು ಸಂಪರ್ಕಿಸಿದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಸ್ತುತ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೆÇಲೀಸ್ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವದರೊಂದಿಗೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೆÇಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದೆ. ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದಲ್ಲಿ ಸಹಜವಾಗಿ ಜನಮನ್ನಣೆ ದೊರೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಪೆÇಲೀಸ್ ಇಲಾಖೆಯ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿಯನ್ನು ಓದಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಡಿ ಗ್ರಾಮೀಣ ಠಾಣೆಯ ನಿವೃತ್ತ ಪೆÇಲೀಸ್ ಉಪ ನಿರೀಕ್ಷಕ ಜಿ.ಎಸ್.ಚಕ್ಕಡಿ ಅವರು ಕವಾಯತು ತಂಡಗಳ ಪರಿವೀಕ್ಷಣೆ ಹಾಗೂ ಗೌರವ ವಂದನೆ ಸ್ವೀಕರಿಸಿದರು.
ಪೆÇ್ರಬೆಷನರಿ ಡಿವೈಎಸ್‍ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಆರು ತುಕಡಿಗಳ ಆಕರ್ಷಕ ಪಥಸಂಚಲನ ನಡೆಯಿತು. ಡಿಸಿ, ಸಿಇಒ ಹಾಗೂ ಎಸ್‍ಪಿ ಸಮ್ಮುಖದಲ್ಲಿ ಪೆÇಲೀಸ್ ಧ್ವಜಗಳನ್ನು ಬಿಡುಗಡೆಗೊಳಿಸಿ ವಿತರಿಸಲಾಯಿತು. 2023ನೇ ಸಾಲಿನಲ್ಲಿ ನಿವೃತ್ತರಾದ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು ನಂತರ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಜರುಗಿಸಲಾಯಿತು.
ಹೆಚ್ಚುವರಿ ಪೆÇಲೀಸ್ ಅಧೀಕ್ಷಕ-1 ಶಂಕರ ಕೆ. ಮಾರಿಹಾಳ ಸ್ವಾಗತಿಸಿದರು, ಪಿಎಸ್‍ಐ ಕೃಷ್ಣವೇಣಿ ಹಾಗೂ ಪೆÇಲೀಸ್ ಪೇದೆ ದಶರಥ ನಿರೂಪಿಸಿದರು. ಹೆಚ್ಚುವರಿ ಪೆÇಲೀಸ್ ಅಧೀಕ್ಷಕ-2 ರಾಮನಗೌಡ ಹಟ್ಟಿ ವಂದಿಸಿದರು.