ಏ. 30 ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ಶೇ. 5 ರಷ್ಟು ರಿಯಾಯಿತಿ
ಕಲಬುರಗಿ:ಏ.02:ಪ್ರತಿ ಹಣಕಾಸು ವರ್ಷ ಪ್ರಾರಂಭವಾದ ಮೊದಲ ತಿಂಗಳಿನಲ್ಲಿ ಚಾಲ್ತಿ ವರ್ಷದ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ, ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿ ಕಲ್ಪಿಸಲಾಗುತ್ತದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ವತ್ತುಗಳ ಮಾಲೀಕರು, ಅನುಭೋಗದಾರರು ಹಾಗೂ ಸಾರ್ವಜನಿಕರು, ಚಾಲ್ತಿ ವರ್ಷದ ಆಸ್ತಿ ತೆರಿಗೆಯನ್ನು 2024ರ ಏಪ್ರಿಲ್ 30 ರೊಳಗಾಗಿ ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ, ಶೇ 5 ರಷ್ಟು ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಆಸ್ತಿ ತೆರಿಗೆ ಪರಿಷ್ಕರಣೆ: ಕಲಬುರಗಿ ನಗರ ವ್ಯಾಪ್ತಿಯ ಸ್ಥಿರಾಸ್ಥಿಗಳ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆ ಆಗಿರುವುದರಿಂದ, ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳನ್ನು ಆಸ್ತಿ ತೆರಿಗೆ ತಂತ್ರಾಂಶದಲ್ಲಿ ಅಳವಡಿಸಿಕೊಂಡು 2024-25 ನೇ ಸಾಲಿನ ಆಸ್ತಿ ತೆರಿಗೆ 01-04-2024 ರಿಂದ ಜಾರಿ ಬರುವಂತೆ ಪರಿಷ್ಕರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.