5ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ವಿಜಯಪುರ, ಏ.2:ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ 5ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ವಿಜಯಪುರ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಕರ ಚಾಲನೆ ನೀಡಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಂಡ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ಬುರಣಾಪುರದ ಸರ್ಕಾರಿ ಗೋಶಾಲೆಯಲ್ಲಿ ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಏ.1 ರಿಂದ 30ರವರೆಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಲಸಿಕಾಕರಣ ಸಂದರ್ಭದಲ್ಲಿ ಲಸಿಕೆಯಿಂದ ಯಾವುದೇ ಜಾನುವಾರುಗಳು ವಂಚಿತವಾಗದಂತೆ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ತಿಳಿಸಿದರು. ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ರೈತರಿಗೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಗೊಣಸಗಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಿ.ಎಸ್. ಕನಮಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.