ನವೋದಯ ಶಾಲೆಗೆ ಪ್ರಿಯಾಂಕ ಆಯ್ಕೆ
ಚಿಟಗುಪ್ಪ:ಏ.2: 2023- 24ನೇ ಸಾಲಿನಲ್ಲಿ ನಡೆದ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಿಯಾಂಕ ತಂದೆ ದತ್ತಾತ್ರಿ ಜವಾಹರ್ ನವೋದಯದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನವೋದಯ ಶಾಲೆಗೆ ಆಯ್ಕೆಯಾದ ಪ್ರಯುಕ್ತ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಬಸೀರಾಪುರ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಶುಭ ಹಾರೈಸಿ ಹರ್ಷ ವ್ಯಕ್ತಪಡಿಸಿದರು.