ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯ ಮತದಾನ:ಪುರಾಣಿಕ
ಯಡ್ರಾಮಿ:ಎ.2:ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯವಾಗಿ ಮತದಾನವನ್ನು ಮಾಡಬೇಕು. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನವನ್ನು ಮಾಡುವ ಹಕ್ಕು ನೀಡಿದೆ’ ಎಂದು ಮಹಾಂತೇಶ ಪುರಾಣಿಕ ವ್ಯಕ್ತಪಡಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಎಸ್.ವಿ.ಇ.ಇ.ಪಿ ತಾಲೂಕು ಸಮಿತಿ ವತಿಯಿಂದ ಸೋಮವಾರ ಮತದಾನ ಜಾಗೃತಿ ಜಾಥ ಉದ್ದೇಶಿಸಿ ಮಾತನಾಡುತ್ತ.
ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು.
ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು. ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು’ ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳುಲಾಗಿದೆ ಎಂದರು
ಪಟ್ಟಣದ ಸರ್ದಾರ ಶರಣಗೌಡ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೂ “ಮತದಾನ ನಮ್ಮ ಹಕ್ಕು ತಪ್ಪದೇ ಮತದಾನ ಮಾಡಿ” ಎಂದು ಪಟ್ಟಣದಲ್ಲಿ ಪ್ರಮುಖ ಬೀದಿಗಳ ಮೂಲಕ ಘೋಷಣೆಯೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ಜಾಗೃತಿ ಜಾಥಾ ವೇಳೆಯಲ್ಲಿ ತಹಸೀಲ್ದಾರ ಶಶಿಕಲಾ ಪಾದಗಟ್ಟಿ,ಮಹಾಂತೇಶ ಪುರಾಣಿಕ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಯಡ್ರಾಮಿ,ಮಹಾಂತೇಶ ಕೌಲಾಪೂರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಯಡ್ರಾಮಿ,ಪಾತೀಮಾ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಇಲಾಖೆ ಮೇಲ್ವಿಚಾರಕಿ,ತಾಲೂಕು ಪಂಚಾಯತಿ ಪಿ.ಡಿ.ಒ ಗಳು ಸಿಬ್ಬಂದಿಗಳು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಮತ್ತು ಅಂಗನವಾಡಿ ಶಿಕ್ಷಕಿಯರು ಆಶಾ ಕಾರ್ಯಕರ್ತರು ಇತರರು ಭಾಗವಹಿಸಿದ್ದರು.