ಬೆಂಗಳೂರು ಸೆಂಟ್ರಲ್‌ನಲ್ಲಿ ಕಾಂಗ್ರೆಸ್ ಅಲೆ
ಕೆ.ಆರ್.ಪುರ, ಏ.೨- ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರ ಅಲೆಯಿದ್ದು, ಕಾಂಗ್ರೆಸ್ ಪಕ್ಷ ಹೊರಡಿಸಿರುವ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಚಿವ ಬೈರತಿ ಸುರೇಶ್ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಬೈರತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು..
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೆ ತಲುಪಿಸುವ ಕಾರ್ಯ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು. ಬಳಿಕ ಮಾತನಾಡಿದ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ
ಮನ್ಸೂರ್ ಅಲಿಖಾನ್ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕ ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..
ಈ ವೇಳೆ ಮಾಜಿ ಸಚಿವ ಹೆಚ್.ನಾಗೇಶ್,ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್, ಬೆಂ.ಪೂರ್ವ ಜಿಲ್ಲಾಧ್ಯಕ್ಷರಾದ ನಂದಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅನಿಲ್ ಕುಮಾರ್ ಬಿ.ಕೆ.ಬಾಬುಗೌಡ, ನಾಗಣ್ಣ, ಕೆಪಿಸಿಸಿ ಸದಸ್ಯರಾದ ಜಯರಾಮ ರೆಡ್ಡಿ, ಜ್ಯೋತಿಪುರ ಚಂದ್ರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.