ಏ.5 ರಂದು ಬಾಬೂಜಿ ಜಯಂತ್ಯುತ್ಸವ
ಕಲಬುರಗಿ,ಏ.2: ಜೈ ಭಾರತ ಮಾತಾ ಸೇವಾ ಸಮಿತಿಯಿಂದ ಏ.5ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 117 ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಎಸ್.ಝಳಕಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೈ ಭಾರತ ಮಾತಾ ಸೇವಾ ಸಮಿತಿ ರಾಷ್ಟ್ರೀಯ ಸಂಸ್ಥಾಪಕ ಪೂಜ್ಯ ಹವಾ ಮಲ್ಲಿನಾಥ ಮಹಾರಾಜ ನಿರಗುಡಿಯವರ ಸಾನ್ನಿಧ್ಯದಲ್ಲಿ ಅದ್ಧೂರಿಯಾಗಿ ಜಯಂತ್ಯುತ್ಸವ ಆಚರಿಸಲಾಗುವುದು ಎಂದರು.
ಏ.5 ರಂದು ಬೆಳಗ್ಗೆ 10ಕ್ಕೆ ನಗರದ ಹೀರಾಪುರ ಹತ್ತಿರದ ಗಣೇಶ ಲಿಂಗ ಹವಾ ಮಲ್ಲಿನಾಥ ಆಶ್ರಮದಿಂದ ಅನ್ನಪೂರ್ಣ ಕ್ರಾಸ್ ಸಮೀಪದ ಡಾ.ಜಗಜೀವನರಾಮ್ ಪುತ್ಥಳಿ ವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಹಲಗೆ ನಾದದೊಂದಿಗೆ ವಿವಿಧ ಕಲಾ ಪ್ರದರ್ಶನದೊಂದಿಗೆ ನಗರದ ಆಳಂದ ಚೆಕ್ ಪೆÇೀಸ್ಟ್ ಮಾರ್ಗವಾಗಿ ಸೂಪರ್ ಮಾರ್ಕೆಟ್ ಮೂಲಕ ಡಾ.ಜಗಜೀವನರಾಮ್ ಪುತ್ಥಳಿ ವರೆಗೆ ಮೆರವಣಿಗೆ ಜರುಗಲಿದೆ ಎಂದರು.
ಈ ಕಾರ್ಯಕ್ರಮದ ಭಾಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ನಂತರ ಕಲೆ, ಶಿಕ್ಷಣ, ಸಮಾಜ ಸೇವೆ, ಕೃಷಿ, ಮಾಧ್ಯಮ, ಕಾರ್ಮಿಕ ,ವೈದ್ಯಕೀಯ ಕ್ಷೇತ್ರದ ಸಾಧಕರಿಗೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಗುಂಡಪ್ಪ ಸಿರಡೋಣ, ಪರಮೇಶ್ ಆಲಗೋಡ, ದತ್ತು ಹೈಯಾಳಕರ್, ಎಂ.ಎಸ್.ಪಾಟೀಲ್ ನರಿಬೋಳ, ಸಂದೇಶ ಪವಾರ್, ರಾಮಪ್ರಸಾದ ಹೊಡಲ್ ಇತರರಿದ್ದರು.