ಸೆಕ್ಟರ್ ಅಧಿಕಾರಿಗಳು ಸೇತುವೆಯಂತೆ ಕಾರ್ಯ ನಿರ್ವಹಿಸಿ
ಧಾರವಾಡ,ಏ2: ಚುನಾವಣಾ ಕಾರ್ಯಗಳು ನಿಯಮಾನುಸಾರ ನಡೆಯುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಅವರು ಚುನಾವಣಾಧಿಕಾರಿಗೂ (ಆರ್.ಓ) ಮತ್ತು ಮತಗಟ್ಟೆಯಲ್ಲಿನ ಪಿ.ಆರ್.ಓ ಅಧಿಕಾರಿಗೂ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಹುಬ್ಬಳ್ಳಿ ಹೆಸ್ಕಾಂ ಪ್ರಧಾನ ವ್ಯವಸ್ಥಾಪಕರಾದ ಹಿರಿಯ ಕೆಎಎಸ್ ಅಧಿಕಾರಿ ಸಿದ್ದು ಹುಲ್ಲೋಳಿ ಅವರು ಎಲ್ಲ ಸೆಕ್ಟರ್ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.