ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೆÇಲೀಸರ ಪಾತ್ರ ಪ್ರಮುಖ
ಹುಬ್ಬಳ್ಳಿ, ಏ.2: ವೀರ, ಧೀರ, ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯ ನಿಷ್ಠೆ ತೋರಿದ ಪೆÇಲೀಸ್‍ರನ್ನು ನೆನೆಯುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರೀಲ್ 2 ರಂದು ಪೆÇಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. ನಿವೃತ್ತ ಪೆÇಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುವುದು. ಬೇರೆ ಬೇರೆ ಇಲಾಖೆಗಳಿಗೆ ಹೋಲಿಸಿದರೆ ಪೆÇಲೀಸ್ ಇಲಾಖೆ ಅತ್ಯಂತ ಶಿಸ್ತಿನ ಇಲಾಖೆಯಾಗಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಪೆÇಲೀಸರು ಬಹಳ ಪ್ರಮುಖ ಪಾತ್ರ ವಹಿಸಿರುತ್ತಾರೆ ಎಂದು ನಿವೃತ್ತ ಪೆÇಲೀಸ್ ಸಬ್ ಇನ್ಸಪೆಕ್ಟರ್ ಎಸ್.ಎಲ್. ಕಸ್ತೂರಿ ಹೇಳಿದರು.
ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತಾಲಯದಿಂದ ಹಮ್ಮಿಕೊಳ್ಳಲಾಗಿದ್ದ ಪೆÇಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೆÇಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಹಕಾರ ಹಾಗೂ ಮಾರ್ಗದರ್ಶನದಿಂದ ಉತ್ತಮ ಸೇವೆ ಸಲ್ಲಿಸಬಹುದಾಗಿದೆ. ನಾವು ನಮ್ಮ ಕರ್ತವ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಾರ್ವಜನಿಕರೊಂದಿಗೆ ಜನಸ್ನೇಹಿ ಪೆÇಲೀಸರಾಗಿ ಕರ್ತವ್ಯ ನಿರ್ವಹಿಸುವುದು ಹೆಮ್ಮೆಯ ವಿಷಯವಾಗಿದೆ. ಇಂತಹ ಇಲಾಖೆಯಲ್ಲಿ ದಿನದ 24 ಗಂಟೆ ಕಾಲ ಒತ್ತಡದಲ್ಲಿ ಸೇವೆ ಸಲ್ಲಿಸುತ್ತಿರುತ್ತೇವೆ. ಹೀಗಾಗಿ ನಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಸೂಕ್ತ. ಅಲ್ಲದೇ ಕುಟುಂಬ ವರ್ಗದವರಿಗೆ ಸಮಯವನ್ನು ಮೀಸಲಿಡಬೇಕಾಗಿರುವುದು ಬಹಳ ಅವಶ್ಯವಾಗಿದೆ. ಕೆಲವು ಸಂದರ್ಭಗಳಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಣೆ ಮಾಡಬೇಕಾಗಿರುತ್ತದೆ. ಅಧಿಕಾರಿಗಳು ಹಾಗೂ ನಿವೃತ್ತ ಸಿಬ್ಬಂದಿಗಳ ಕುಂದುಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತಾಲಯ ಘಟಕ ಸ್ಪಂದಿಸುತ್ತಾ ಬಂದಿದೆ ಎಂದು ಅವರು ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ಮಾತನಾಡಿ, ಕಳೆದ ಬಾರಿ 33 ಲಕ್ಷ 50 ಸಾವಿರ ಮೌಲ್ಯದ ಪೆÇಲೀಸ್ ಧ್ವಜಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಸಾರಿ ಹೆಚ್ಚಿನ ಮೊತ್ತದ ಹಣ ಸಂಗ್ರಹಣೆಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. 2023-24ರಲ್ಲಿ ನಿವೃತ್ತ ಪೆÇಲೀಸ್ ಅಧಿಕಾರಿಗಳ ಕಲ್ಯಾಣ ನಿಧಿ ಸಮಿತಿ ಸಭೆಗಳನ್ನು ಮಾಡಲಾಗಿದೆ. ನಿವೃತ್ತ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಸಹಾಯಧನವನ್ನು ರೂ. 5 ಲಕ್ಷ 18 ಸಾವಿರ ಹಾಗೂ ನಿಧನ ಹೊಂದಿದ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳ ಅಂತ್ಯ ಸಂಸ್ಕಾರಕ್ಕಾಗಿ ರೂ. 1 ಲಕ್ಷದ 20 ಸಾವಿರ ಧನ ಸಹಾಯವನ್ನು ಮಂಜೂರು ಮಾಡಲಾಗಿದೆ. ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಏಪ್ರೀಲ್ 2023 ರಿಂದ ಮಾರ್ಚ 2024ರವರೆಗೆ ಒಟ್ಟು 652 ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಅರ್ಹ ಕುಟುಂಬ ಸದಸ್ಯರು ವೈದ್ಯಕೀಯ ಸೌಲಭ್ಯವನ್ನು ಪಡೆದಿರುತ್ತಾರೆ. 2023-24ರಲ್ಲಿ ಪೆÇಲೀಸರ ಮಕ್ಕಳ ಎಸ್.ಎಸ್.ಎಲ್.ಸಿ ಹಾಗೂ ನಂತರದ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ರೂ. 15 ಲಕ್ಷ 7 ಸಾವಿರ ಮೊತ್ತದ ಶೈಕ್ಷಣಿಕ ಸಹಾಯ ಧನವನ್ನು ಒದಗಿಸಲಾಗಿದೆ. ಸೇವೆಯಿಂದ ವಯೋನಿವೃತ್ತಿ ಹೊಂದಿದ 42 ಸಿಬ್ಬಂದಿಗಳಿಗೆ ತಲಾ 5 ಸಾವಿರ ವೆಚ್ಚದಲ್ಲಿ ಬಿಳ್ಕೋಡುಗೆ ಸಮಾರಂಭವನ್ನು ಏರ್ಪಡಿಸಿ ಆತ್ಮೀಯವಾಗಿ ಸನ್ಮಾನಿಸಲಾಗಿರುತ್ತದೆ. ನಿವೃತ್ತ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಸಂಘದಲ್ಲಿ ಇಲ್ಲಿಯವರೆಗೆ 370 ಜನರು ಸದಸ್ಯರಾಗಿರುವರು. ನಿವೃತ್ತ ಪೆÇಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ಯೋಜನೆ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಅಲ್ಲದೇ ಸಂಘದ ಸದಸ್ಯರಾಗಲು ಪ್ರೇರಣೆ ನೀಡಬೇಕಿದೆ. ಪೆÇಲೀಸ್ ಧ್ವಜ ಮಾರಾಟದಿಂದ ಬರುವ ಹಣವನ್ನು ನಿವೃತ್ತ ಪೆÇಲೀಸ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬದವರ ಶ್ರೇಯೋಭಿವೃದ್ಧಿಗೆ ವ್ಯಯಿಸಲಾಗುವುದು ಎಂದರು.
ಮಾರುತಿ ಹೆಗಡೆ ಅವರ ನೇತೃತ್ವದಲ್ಲಿ ವಿವಿಧ ಪಡೆಗಳು ಆಕರ್ಷಕ ಪಥ ಸಂಚಲನ ನಡೆಸಿದವು.
ಡಿಸಿಪಿಗಳಾದ ಯಲ್ಲಪ್ಪ ಕಾಶಪ್ಪನವರ, ಎಸಿಪಿಗಳಾದ ಆರ್.ಕೆ. ಪಾಟೀಲ, ವಿಜಯಕುಮಾರ ತಳವಾರ, ನಿವೃತ್ತ ಡಿಐಜಿಪಿ ರವಿಕುಮಾರ ನಾಯಕ, ನಿವೃತ್ತ ಡಿಸಿಪಿ ಎಚ್.ಎ. ದೇವರಹೊರು, ನಿವೃತ್ತ ಡಿಎಸ್‍ಪಿಗಳಾದ ಆರ್.ಐ.ಅಂಗಡಿ, ಪ್ರಭುದೇವ ಮಾನೆ, ಶಿವಶಂಕರ ಗಡಾದಿ, ವಿ.ಬಿ. ಬೆಳವಡಿ, ನಿವೃತ್ತ ಪಿಐ ಅರುಣಕುಮಾರ ಸಾಳುಂಕೆ, ನಿವೃತ್ತ ಪಿಎಸ್‍ಐ ಆರ್.ಬಿ. ನೀರಲಗಿ, ಎಸ್.ಎನ್.ಬಾಳಿಕಾಯಿ, ವಿ.ಎಸ್. ಅಂಗಡಿ, ಹುಬ್ಬಳ್ಳಿ ಧಾರವಾಡ ನಗರದ ನಿವೃತ್ತ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಟ್ರಾಫಿಕ್ ವಾರ್ಡನ್, ಕುಟುಂಬಸ್ಥರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಹುಬ್ಬಳ್ಳಿ ಧಾರವಾಡ ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೆÇಲೀಸ ಆಯುಕ್ತರಾದ ರಾಜೀವ ಎಂ. ಸ್ವಾಗತಿಸಿದರು. ಪೆÇಲೀಸ್ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ನಿರೂಪಿಸಿದರು. ಹುಬ್ಬಳ್ಳಿ ಧಾರವಾಡ ನಗರ ಅಪರಾಧ ಮತ್ತು ಸಂಚಾರ ಉಪ ಪೆÇಲೀಸ ಆಯುಕ್ತರಾದ ರವೀಶ ಸಿ.ಆರ್. ವಂದಿಸಿದರು.