ಸ್ವೀಪ್ ಸಮಿತಿ ಸಭೆ
ಗದಗ,ಏ2: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7 ರಂದು ಮತದಾನ ಜರುಗಲಿದ್ದು ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಸ್ವೀಪ್ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಬಲಿಷ್ಟಗೊಳಿಸಲು ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಅರ್ಹ ಮತದಾರರು ಮತದಾನ ಮಾಡಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣ, ರೇಲ್ವೆ, ಬ್ಯಾಂಕ್ , ಆಸ್ಪತ್ರೆಗಳು ಸೇರಿದಂತೆ ವಿವಿಧ ಪ್ರಮುಖ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮತದಾನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ , ಸಂತೆಗಳಲ್ಲಿಯೂ ಸಹ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ ವಹಿಸಬೇಕೆಂದರು.
ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಅವರು ಮಾತನಾಡಿ ಜಿಲ್ಲೆಯಿಂದ ವಲಸೆ ಹೋದವರ ಕುರಿತು ಮಾಹಿತಿ ಸಂಗ್ರಹಿಸಿ ಅವರು ಕೂಡ ಕಡ್ಡಾಯವಾಗಿ ಮತದಾನ ಮಾಡಲು ಅವರನ್ನು ಪೆÇ್ರೀತ್ಸಾಹಿಸಬೇಕೆಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಅರ್ಹರ ಪ್ರತಿಯೊಂದು ಮತವೂ ಅತ್ಯಮೂಲ್ಯವಾಗಿದ್ದು ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಮತದಾನದ ಮಹತ್ವ ಕುರಿತು ಬ್ಯಾನರ್ ಅಳವಡಿಸುವುದು ಹಾಗೂ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲು ಕ್ರಮ ಕೈಗೊಳ್ಳಬೇಕೆಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.