ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ
ಸಂಜೆವಾಣಿ ನ್ಯೂಸ್
ಮೈಸೂರು: ಏ.02:- ದೇಶದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದ್ದು, ನನ್ನ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಒಳ್ಳೆಯ ವಾತಾವರಣವಿದ್ದು, ನನ್ನ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸ ಇದೆ. ಏ.3ರಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಅದಕ್ಕೂ ಮುನ್ನ ತಾಯಿಯ ಆರ್ಶಿವಾದ ಪಡೆದಿದ್ದೇನೆ. ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳುವಂತೆ ಯಡಿಯೂರಪ್ಪ ಅವರನ್ನು ಆಹ್ವಾನ ಮಾಡಿದ್ದೇನೆ ಎಂದರು. ಇದೇ ವೇಳೆ ಸಚಿವ ಶಾಮನೂರೂ ಶಿವಶಂಕರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದು ಕಾಂಗ್ರೆಸ್‍ನ ಮನಸ್ಥಿತಿಯಾಗಿದ್ದು, ಮಹಿಳೆಯರ ಮೇಲೆ ಅವಗಿರುವ ಗೌರವ ಏನು ಎಂಬುದಕ್ಕೆ ಈ ಹೇಳಿಕೆಯೇ ಸಾಕ್ಷಿಯಾಗಿದೆ. ಮಹಿಳೆಗೆ ಗೌರವ ನೀಡುವ ಸಂಸ್ಕೃತಿ ಯೇ ಅವರಿಗಿಲ್ಲ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿರುವ ಶೋಭಾ ಕರಂದ್ಲಾಜೆ ಸೋಮವಾರ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಏ.3ರಂದು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಸಚಿವೆ, ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಮುಂದೆ ಬಿ ಫಾರಂ ಇಟ್ಟು, ಸೀರೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು.