ಜನತಾ ದರ್ಶನಕ್ಕೆ ಚಾಲನೆ
ಗದಗ,ಸೆ.19: ಪ್ರಜೆಯೇ ನಿಜವಾದ ಪ್ರಭು. ಪ್ರಜೆಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಕಾರ್ಯವಾಗಲಿ. ಅನವಶ್ಯಕ ಅಲೆದಾಟ ತಪ್ಪಿಸುವುದೇ ಜನತಾದರ್ಶನ ಕಾರ್ಯಕ್ರಮದ ಧ್ಯೇಯೋದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಖನಿಜ ನಿಗಮದ ಅಧ್ಯಕ್ಷರೂ ಆಗಿರುವ ರೋಣ ಶಾಸಕ ಜಿ.ಎಸ್.ಪಾಟೀಲ ಅವರು ಮಾತನಾಡಿ ಜನತಾ ದರ್ಶನ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವೇದಿಕೆಯಾಗಿದೆ. ವಿನಾಕಾರಣ ವಿಳಂಭಧೋರಣೆ ತಪ್ಪಿಸುವ ಮೂಲಕ ತುರ್ತಾಗಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸುವುದಾಗಿದೆ. ಇದರ ಸಂಪೂರ್ಣ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆಯಬೇಕೆಂದರು.
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ , ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ, ಹೆಚ್ಚುವರಿ ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ ಇದ್ದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಅತಿಥಿಗಳನ್ನು ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ವಂದಿಸಿದರು. ದತ್ತ ಪ್ರಸನ್ನ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.