ಪರಿಹಾರಕ್ಕೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹ
ಆಳಂದ:ಏ.1: ತಾಲೂಕಿನ ದಣ್ಣೂರ ಗ್ರಾಮದ ಕೆರೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟ ಕೂಲಿ ಕಾರ್ಮಿಕ ಶರಣಪ್ಪ ಬೋಲ್ಡೆ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆಗ್ರಹಿಸಿದ್ದಾರೆ.
ದಣ್ಣೂರ ಗ್ರಾಮದ ಮೃತನ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು, ನರೇಗಾದಲ್ಲಿ ಕೆಲಸ ಮಾಡಿ ಬಂದ ಹಣದಿಂದ ಕುಟುಂಬ ನಿರ್ವಹಣೆ ಮಾಡುತ್ತಿದ್ದ. ಆದರೆ ಈಗ ಏಕಾಏಕಿ ಮನೆಯ ಯಜಮಾನನನ್ನು ಕಳೆದುಕೊಂಡು ಕುಟುಂಬದವರು ನಿರ್ಗತಿಕರಾಗಿದ್ದಾರೆ ಆದ್ದರಿಂದ ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ ರಾಜ್ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮೃತ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ. ರೂ.ಗಳ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.