ಮಠಾಧೀಶರ ಭೇಟಿ ಮಾಡಿದ ಗಾಯತ್ರಿ ಸಿದ್ದೇಶ್ವರ್

ಸಂಜೆವಾಣಿ ವಾರ್ತೆ
ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ‌ ಗಾಯಿತ್ರಿ ಸಿದ್ದೇಶ್ವರ್ ಅವರು ದಾವಣಗೆರೆ ನಗರದ ವಿವಿಧ ಮಠಗಳಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.ಗುರುವಾರ ಸಂಜೆ ದಾವಣಗೆರೆ ನಗರದ ವಿರಕ್ತ ಮಠಕ್ಕೆ ಭೇಟಿ ನೀಡಿ, ಶ್ರೀ ಬಸವ ಪ್ರಭು ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು.ಶುಕ್ರವಾರ ಬೆಳಗ್ಗೆ ಶ್ರೀಶೈಲ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ‌ ಹಾಗೂ ಶ್ರೀಶೈಲ ಜಗದ್ಗುರುಗಳಾ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು.ಬಳಿಕ ಮಹಾನಗರ ಪಾಲಿಕೆ ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು.ಈ ವೇಳೆ ಬಿಜೆಪಿ ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ಜಿ.ಎಸ್.ಅಶ್ವಿನಿ, ಜಿ.ಎಲ್.ರಾಜೀವ್, ಗೌತಮ್ ಜೈನ್, ನಜೀರ್ ಮತ್ತಿತರರು ಇದ್ದರು.