ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ
ಧಾರವಾಡ,ಏ1: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಶ್ರೀ ಅಗ್ನಿಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುμÁ್ಪರ್ಪಣೆ ಸಲ್ಲಿಸಿ, ನಮಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಸಮಾಜ ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.