ರಕ್ಷಾ ರಾಮಯ್ಯ ಆಯ್ಕೆಗೆ ಸ್ವಾಗತ
ಚಿಕ್ಕಬಳ್ಳಾಪುರ : ಏ. ೦೧.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ ಫಾರಂ ಪಡೆದಿರುವ ರಕ್ಷಾ ರಾಮಯ್ಯ ರವರು ಸಮರ್ಥ ಅಭ್ಯರ್ಥಿಗಳಾಗಿದ್ದಾರೆ, ಇವರ ಆಯ್ಕೆಯನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಬಿಎಸ್ ರಫಿಉಲ್ಲಾ ತಿಳಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ರವರಿಗೆ ಬಿ ಫಾರಂ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಭದ್ರಕೋಟೆ ಆಗಿದ್ದು ರಕ್ಷಾ ರಾಮಯ್ಯ ರವರಿಗೆ ಅಲ್ಪ ಸಂಖ್ಯಾತರ ಸಂಪೂರ್ಣ ಬೆಂಬಲ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಉತ್ತಮ ಧಾರ್ಮಿಕ ಹಾಗೂ ರಾಜಕೀಯ ಹಿನ್ನಲೆ ಉಳ್ಳ ಮನೆತನದಿಂದ ಹೊರ ಬಂದಿರುವ ರಕ್ಷಾ ರಾಮಯ್ಯ ರವರು ಸಾಮಾಜಿಕ ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದವರಾಗಿದ್ದು ಇವರು ಯುವಕರು ಸಹ ಆಗಿರುವುದರಿಂದ ಇವರನ್ನು ಲೋಕಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡಿದ್ದಲ್ಲಿ ಕ್ಷೇತ್ರದ ಅಭಿವೃದ್ಧಿ ಖಂಡಿತ ಸಾಧ್ಯವಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.