ಬಸ್ಸಿನಲ್ಲಿ ದಾಖಲೆ ಇಲ್ಲದ 2 ಲಕ್ಷ ರೂಪಾಯಿ ವಶ
ಅಥಣಿ : ಮಾ.31:ನೆರೆಯ ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಆಗಮಿಸಿದ ಸಾರಿಗೆ ಬಸ್ಸಿನಲ್ಲಿ ದಾಖಲೆ ಇಲ್ಲದ ಎರಡು ಲಕ್ಷ ರೂಪಾಯಿಗಳು ಪತ್ತೆಯಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜಾಗೃತ ದಳದ ಅಧಿಕಾರಿಗಳು ಈ ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ಈ ಹಣ ಸಾಗಾಣಿಕೆಯ ಬಗ್ಗೆ ಅಧಿಕೃತ ದಾಖಲೆ ಒದಗಿಸಿದರೆ ಆ ವ್ಯಕ್ತಿಗೆ ಹಿಂದಿರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಜಾಗೃತ ದಳದ ಅಧಿಕಾರಿ ವೀರಣ್ಣ ವಾಲಿ, ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಶಿವಾನಂದ ಕಲ್ಲಾಪುರ, ಪಿಎಸ್‍ಐ ಶಿವಾನಂದ ಕಾರಜೋಳ ಸೇರಿದಂತೆ ಪೆÇಲೀಸ್ ಸಿಬ್ಬಂದಿ ಭಾಗವಹಿಸಿದ್ದರು.