ಮತದಾನದ ಪ್ರತಿಜ್ಞಾವಿಧಿ ಬೋಧನೆ
ಕಲಬುರಗಿ:ಮಾ.31: ಜಿಲ್ಲೆಯ ಅಫಜಲಪುರ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನೇತೃತ್ವದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣಾ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಮತದಾನದ ಸೆಲ್ಫಿ ಸ್ಟ್ಯಾಂಡ್ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ರಮೇಶ ಪಾಟೀಲ, ಕ್ಷೇತ್ರ ಶಿಕ್ಷಣ ಇಲಾಖೆ ಹಾಜಿ ಮಲಂಗ್, ಅಆPಔ, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, , ಪಂಚಾಯತ ಅಭಿವೃದ್ಧಿ ಅಧಿಕಾರಿ ಈರಯ್ಯ ಹಿರೇಮಠ, ಪಾರ್ವತಿ ಪೂಜಾರಿ, ಮೇಗಾ ಪಾಟೀಲ್, ಸಾವಿತ್ರಿ ಮೇತ್ರಿ, ಅನಸೂಯಾ, ಸೇರಿದಂತೆ ಎಲ್ಲಾ ಗ್ರಾಮ ಪಂಚಾಯತಿ ಪಿಡಿಒ ಗಳು ಸೇರಿದಂತೆ ತಾಲ್ಲೂಕು ಪಂಚಾಯತ ಸಿಬ್ಬಂದಿ ಇದ್ದರು.