ಉತ್ತಮ ಬದುಕಿಗೆ ಆರೋಗ್ಯವಾಗಿರುವುದು ಅಗತ್ಯ: ಸಿಇಓ ಡಾ. ಗಿರೀಶ್ ಬದೋಲೆ
ಬೀದರ್: ಮಾ.31: ದೈನಂದಿನ ಜೀವನ ಉತ್ತಮ ಬದುಕು ಸಾಗಿಸಲು ಆರೋಗ್ಯವಾಗಿರುವುದು ಅತಿಮುಖ್ಯವಾಗಿದೆ ಆದ್ದರಿಂದ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದ್ದೋಲೆ ಹೇಳಿದರು.
ಶನಿವಾರ ಬೀದರ ನಗರದ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದಿನನಿತ್ಯದ ಕೆಲಸ-ಕಾರ್ಯಗಳ ಮಧ್ಯೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಆಗುವುದಿಲ್ಲಾ ಆದರೂ ಉತ್ತಮ ಜೀವನಕ್ಕಾಗಿ ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಂ ಸವಿತಾ ಮಾತನಾಡಿ, ಇತ್ತೀಚಿಗೆ ಬಿಸಿಲಿನ ಬೆಗೆ ಹೆಚ್ಚಾಗಿರುವುದುರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು ಹೆಚ್ಚಿನ ನೀರು ಹಾಗೂ ತಂಪು ಪಾನೀಯ ಸೇವಿಸುವ ಮೂಲಕ ಇದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಧ್ಯಾನೇಶ್ವರ ನಿರಗುಡೆ,ಆರೋಗ್ಯ ಅಧಿಕಾರಿ ಸಾಹಿಲ್, ನರೇಗಾ ಸಹಾಯಕ ನಿರ್ದೇಶಕಿ ಲಕ್ಷ್ಮೀ ಬಿರಾದಾರ, ತಾಲೂಕಾ ಆರೋಗ್ಯ ಅಧಿಕಾರಿ ಸಂಗಾರೆಡ್ಡಿ ಸೇರಿದಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.