ಚಿತ್ರದುರ್ಗ ಟಿಕೆಟ್ ಗೊಂದಲ ಪರಿಹಾರವಾಗಲಿದೆ: ಜೋಶಿ
ಹುಬ್ಬಳ್ಳಿ, ಮಾ 30: ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಲ್ಲಿ ಗೊಂದಲಗಳಿರುವುದು ಸಹಜ, ಬಿಜೆಪಿಯಲ್ಲಿ ಚಿತ್ರದುರ್ಗದ ಟಿಕೆಟ್ ವಿಚಾರದಲ್ಲಿರುವ ಗೊಂದಲವನ್ನು ನಾಯಕರು ಪರಿಹರಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಟಿಕೆಟ್ ವಿಚಾರದ ಕುರಿತಂತೆ ಸುಮಲತಾ ಅವರನ್ನು ಸಮಾಧಾನಗೊಳುಸುವ ಕೆಲಸ ನಡೆದಿದೆ ಎಂದು ಅವರು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸಂಸ್ಕøತಿಯನ್ನು ತೋರಿಸುತ್ತದೆ ಎಂದ ಅವರು, ಈಗಾಗಲೇ ಅಮಿಶ್ ಶಾ ವಿರುದ್ದದ ಪ್ರಕರಣವನ್ನು ಕೋರ್ಟ್ ವಜಾ ಮಾಡಿದ್ದು, ಅವರು ಅಪರಾಧಿಯಲ್ಲ ಎನ್ನುವುದು ಸಾಬೀತಾಗಿದೆ. ಈ ಸಂದರ್ಭದಲ್ಲಿ ಶಾ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಜೋಶಿ ಹೇಳಿದರು.