ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆಎಸ್ ಎಸ್ ಎಮ್ ಎಸ್ ಪ. ಪೂ. ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
ಅಥಣಿ :ಸೆ.೧೯: ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಕೆಎಲ್‌ಇ ಸಂಸ್ಥೆಯ ಸ್ಥಳೀಯ ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸತತ ಮೂರನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಸನ್-೨೦೨೪-೨೫ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಕ್ರೀಡಾಕೂಟಗಳು ಇತ್ತೀಚಿಗೆ ಜರುಗಿದ್ದು, ಅಥಣಿ ತಾಲೂಕಿನ ೪೨ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಅದರಲ್ಲಿ ಕೆ.ಎಲ್.ಇ.ಸಂಸ್ಥೆಯ, ಎಸ್.ಎಸ್.ಎಮ್.ಎಸ್. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಲ್ಲ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ೨೫೩ ಅಂಕಗಳಿoದ ಪ್ರಥಮ ಸ್ಥಾನ ಪಡೆಯುವ ಮೂಲಕ ಸತತ ೩ನೇ ವರ್ಷ ಪ್ರಥಮ ಸ್ಥಾನದಲ್ಲಿ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸುವ ಮೂಲಕ ಸಂಸ್ಥಗೆ, ಕಾಲೇಜಿಗೆ ಹಾಗೂ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಯನ್ನು ಮೆಚ್ಚಿ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮತ್ತು ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಂ.ಜಿ.ಹAಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಪಿ. ಆರ್.ಭಂಡಾರೆ, ತಾಲೂಕಾ ಕ್ರೀಡಾ ಸಂಯೋಜಕ ಜಿ.ಎಮ್.ಚನಗೊಂಡ ಹಾಗೂ ಪ್ರಾಚಾರ್ಯರಾದ ಡಾ, ಬಿ.ಎಸ್.ಕಾಂಬಳೆ, ಡಾ.ರೇಷ್ಮಾ ಇನಾಮದಾರ, ಕ್ರೀಡಾ ವಿಭಾಗದ ಸಂಯೋಜಕ ಡಾ. ಎಸ್.ಎಮ್.ಜನಗೌಡ, ದೈಹಿಕ ನಿರ್ದೇಶಕ ಕಾಶೀನಾಥ. ಖೇತಗೌಡರ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
=========
ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ವಿಭಾಗದಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಸತತ ಮೂರು ವರ್ಷ ಪ್ರಥಮ ಸ್ಥಾನ ಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿರುವುದು ನಮ್ಮೆಲ್ಲರಿಗೆ ಹೆಮ್ಮೆ ಮತ್ತು ಸಂತಸ ತಂದಿದೆ. ಈ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ಕೂಡ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸುತ್ತೇವೆ.