ಮದ್ಯಮರಾಟ, ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ “ಶುಷ್ಕ ದಿನ”ಎಂದು ಘೋಷಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ
ಬೀದರ. ಮಾ.30: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಪ್ರಯುಕ್ತ ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ ಬೀದರ ಜಿಲ್ಲೆಯಲ್ಲಿ ದಿನಾಂಕ: 07-05-2024 ರಂದು ಮತದಾನ ಹಾಗೂ ದಿನಾಂಕ: 04-08-2024 ರಂದು ಮತ ಎಣಿಕೆ ನಡೆಯಲಿದೆ. ಪ್ರಯುಕ್ತ ಬೀದರ ಲೋಕಸಭಾ ಮತಕ್ಷೇತ್ರದಲ್ಲಿ ಚುನಾವಣೆಯನ್ನು ನ್ಯಾಯಸಮ್ಮತ ಹಾಗೂ ನಿಸ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಪ್ರಮುಖವಾಗಿ ಚುನಾವಣೆ ಸಮಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳು ಕೈಗೊಳ್ಳಬೇಕಾಗಿರುವುದರಿಂದ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10-ಬಿ ರಲ್ಲಿ ಪ್ರದ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ: 05-05-2024ರ ಸಾಯಂಕಾಲ 6 ಗಂಟೆಯಿಂದ ದಿನಾಂಕ: 07-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ದಿನಾಂಕ: 03-06-2024ರ ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ: 04-06-2024ರ ಮಧ್ಯರಾತ್ರಿ 12 ಗಂಟೆಯವರೆಗೆ ಬೀದರ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಅಬಕಾರಿ ಸನ್ನದುಗಳನ್ನು (ಕೆ.ಎಸ್.ಬಿ.ಸಿ.ಎಲ್.ಡಿಫೆÇೀ ಬೀದರ ಒಳಗೊಂಡಂತೆ) ಮುಚ್ಚಲು ಹಾಗೂ ಮಧ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ಮಾಡುವುದನ್ನು ನಿಷೇಧಿಸಿ “ಶುಷ್ಕ ದಿನ” ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಆದೇಶಿಸಿದ್ದಾರೆ.
ಒಂದು ವೇಳೆ ಆದೇಶದಲ್ಲಿನ ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ಅಂಥವರು ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135(ಸಿ) ರನ್ವಯ ಶಿಕ್ಷೆಗೆ ಒಳಪಡಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.