ಜಿಲ್ಲಾಡಳಿತದಿಂದ ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ
ವಿಜಯಪುರ, ಮಾ.29: ಜಿಲ್ಲಾಡಳಿತ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಶ್ರೀ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿದರು. ಈ ವೇಳೆ ತಹಸೀಲ್ದಾರ ಕವಿತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ದ್ರಾಕ್ಷಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.