ಶಿಕ್ಷಕರ ಪಾತ್ರ ಅಪಾರವಾದದ್ದು: ಲೋಕೇಶ್
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಸೆ.18: ಶಾಲಾ ಮಕ್ಕಳಲ್ಲಿ ಸೃಜನಾತ್ಮಕತೆ, ಕಲೆ, ಅಭಿವ್ಯಕ್ತಿಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು ಎಂದು ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಹೆಚ್.ಟಿ.ಲೋಕೇಶ್ ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಶೀಳನೆರೆ ಹೋಬಳಿಯ ನೀತಿಮಂಗಲ ಗ್ರಾಮದ ಆದರ್ಶ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಿಂಧಘಟ್ಟ ಸಮೂಹ ಸಂಪನ್ಮೂಲ ವ್ಯಕ್ತಿ ಬಿ.ಎಸ್.ಮಹೇಶ್, ಆದರ್ಶ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಅಶೋಕ್, ತಾಲ್ಲೂಕು ಶಿಕ್ಷಣ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಸ್.ಎಸ್.ಶಿವಕುಮಾರ್, ತಾಲ್ಲೂಕು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರುವನಹಳ್ಳಿ ಬಸವರಾಜು, ಶಿಕ್ಷಕರಾದ ಕುಸ್ತರ್‍ಬಾನು, ಕೆ.ಸಿ.ಮಹದೇವ್, ಶಂಕರೇಗೌಡ, ಸ್ವಾಮಿ, ಕೃಷ್ಣ, ಶ್ರೀಧರ್, ಸುರೇಶ್, ಶಂಕರ್, ಎನ್.ವಿ.ಬಾಬು, ನಾಗೇಂದ್ರ, ಸ್ನೇಹಲತಾ ಸೇರಿದಂತೆ ಹಲವರಿದ್ದರು.