ಬಾಲ್ಯ ವಿವಾಹಗಳು ನಡೆಯದಂತೆ ಅಧಿಕಾರಿಗಳು ಕ್ರಮವಹಿಸಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ. ಮಾ. 29: ದಿನಾಂಕ:10-5-2024 ರಂದು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆಯಿರುವುದರಿಂದ ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿ, ಬಾಲ್ಯವಿವಾಹ ತಡೆಗಟ್ಟುವ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಡಿ ಸಾಮೂಹಿಕ ವಿವಾಹದಲ್ಲಾಗಲೀ ಅಥವಾ ವೈಯಕ್ತಿಕ ವಿವಾಹದಲ್ಲಾಗಲೀ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.
ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದ್ದು, ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯವಾಗಿರುತ್ತದೆ. ಬಾಲ್ಯ ವಿವಾಹವೆಂದರೆ 18ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹವೆಂದು ಪರಿಗಣಿಸಲಾಗುತ್ತದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿಯು ತಾಯಂದಿರ ಮರಣ, ಶಿಶು ಮರಣ, ಅಪೌಷ್ಠಿಕತೆಯನ್ನು ಉಂಟು ಮಾಡುವುದಲ್ಲದೇ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಉಂಟು ಮಾಡುತ್ತದೆ.
ಬಾಲ್ಯವಿವಾಹವೆಂಬ ಅನಿಷ್ಠ ಪದ್ಧತಿ ಹಾಗೂ ಸಾಮಾಜಿಕ ಪಿಡುಗು ಎಂದು ಗುರುತಿಸಿ, ಇದನ್ನು ನಿಷೇಧಿಸಲು ಕೇಂದ್ರ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಗೆ ತಂದಿರುತ್ತದೆ. ಸದರಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ, ಜಿಲ್ಲಾ, ತಾಲ್ಲೂಕಾ, ಗ್ರಾಮ ಪಂಚಾಯತಿ, ಗ್ರಾಮ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನು ನೇಮಿಸಲಾಗಿರುತ್ತದೆ (ಮಾಹಿತಿಯನ್ನು ಲಗತ್ತಿಸಲಾಗಿದೆ).
ಕೇವಲ ಸರ್ಕಾರಿ ಇಲಾಖೆ, ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿರುತ್ತದೆ. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಪ್ರಕಾರ ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ 18 ವರ್ಷದೊಳಗಿನ ಹೆಣ್ಣು ಮಗುವನ್ನು ಮದುವೆಯಾದ ವಯಸ್ಕ ವ್ಯಕ್ತಿ, ಮದುವೆ ಮಾಡುವ ಪಾಲಕರು/ಪೆÇೀಷಕರು, ಇಂತಹ ಮದುವೆಯಲ್ಲಿ ಭಾಗವಹಿಸುವವರು, ಬಾಲ್ಯವಿವಾಹವನ್ನು ಏರ್ಪಡಿಸುವ, ನಿರ್ದೇಶಿಸುವ, ನೆರವೇರಿಸುವ ಮತ್ತು ಮದುವೆಗೆ ಕುಮ್ಮಕ್ಕು ನೀಡುವ ಸಂಸ್ಥೆ/ವ್ಯಕ್ತಿ, ಕಾಯ್ದೆಯಡಿ ನೀಡಿದ ತಡೆಯಾಜ್ಞೆಯನ್ನು ಉಲ್ಲಂಘಿಸಿದವರು, ಮಗುವಿನ ಜವಾಬ್ದಾರಿಯನ್ನು ಹೊತ್ತ ಯಾವುದೇ ವ್ಯಕ್ತಿ/ಸಂಸ್ಥೆಯ ನಿರ್ಲಕ್ಷ??ತೆಯಿಂದ ಬಾಲ್ಯವಿವಾಹವನ್ನು ತಡೆಯಲು ವಿಫಲರಾದವರು ಸಹ ತಪ್ಪಿತಸ್ಥರು. ಇವರುಗಳಿಗೆ ಕಾಯ್ದೆ ಪ್ರಕಾರ “ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ” ಅಥವಾ “ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವೆರಡರಿಂದಲೂ ಶಿಕ್ಷೆಗೆ ಗುರಿಯಾಗತಕ್ಕದು”??, ಈ ಕಾಯ್ದೆಯಡಿ ಪ್ರತಿಯೊಬ್ಬ ಪೆÇಲೀಸ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡುವ ಅವಕಾಶವಿರುತ್ತದೆ.
ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೆÇಲೀಸ್ ಸಹಾಯವಾಣಿ 112 ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ 08482-234003/ ಹಾಗೂ ಸಂಬಂಧಪಟ್ಟ ಪೆÇಲೀಸ್ ಠಾಣೆ ಅವರ ಗಮನಕ್ಕೆ ತುರ್ತಾಗಿ ತರುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.