ಸರಳ ಹಾಗೂ ಸಾಂಕೇತಿಕವಾಗಿ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಣೆ
ಯಾದಗಿರಿ : ಮಾ.29:ಗತಕಾಲದಲ್ಲಿನ ಮಹಾತ್ಮರ ಆದರ್ಶಗಳನ್ನು ತಿಳಿಸುವ ಜಯಂತಿಗಳು ಜೀವನಕ್ಕೆ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.
ಲೋಕಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಜಯಂತಿ ಆಚರಿಸಿ ಅವರು ಮಾತನಾಡಿದರು.
ಇಂದಿನ ಆಧುನಿಕತೆಯ ಜೀವನದಲ್ಲಿ ಬದುಕುತ್ತಿರುವ ನಾವುಗಳು ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನಕ್ಕೆ ಅರ್ಥ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಪಶುಪಾಲನ ಇಲಾಖೆ ಉಪನಿರ್ದೇಶಕ ಡಾ. ರಾಜ ದೇಶಮುಖ, ಕೃಷಿ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಸಾಂಖ್ಯಿಕ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ನಾಗರಾಜ ನಾಗೂರ, ಲೆಕ್ಕ ಪರಿಶೋಧನಾಧಿಕಾರಿ ಸುರೇಶ ಪಾಣಿಬಾತೆ, ವಯಸ್ಕರ ಶಿಕ್ಷಣ ಇಲಾಖೆ ಜಿಲ್ಲಾ ಕಾರ್ಯಕ್ರಮ ಸಹಾಯಕಿ ವೀಣಾಶ್ರೀ , ಜಿಲ್ಲಾ ಪಂಚಾಯತ ಸಿಬ್ಬಂದಿ ರಾಮು ಹತ್ತಿಕುಣಿ, ನಿರ್ಮೀತಿ ಕೇಂದ್ರದ ಪವನಕುಮಾರ, ನರಸಿಂಹ ಸೇರಿದಂತೆ ವಿವಿಧ ಇಲಾಖೆಯ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.