ಪ್ರಧಾನಿ ನರೇಂದ್ರ ಮೋದಿ ಅವಹೇಳನ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ವಿಜಯಪುರ,ಮಾ.29: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮೋದಿ ಮೋದಿ ಎಂದು ಕೂಗುವ ಯುವಕರ ಕೆನ್ನೆಗೆ ಬಾರಿಸಿ ಎಂಬ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ತಂಗಡಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷÀ ಬಸವರಾಜ ಹೂಗಾರ ಮಾತನಾಡಿ, ಶಿವರಾಜ್ ತಂಗಡಗಿ ಅವರ ಈ ಹೇಳಿಕೆ ದೇಶದ ಕೋಟ್ಯಂತರ ಯುವಕರ ಭಾವನೆಗೆ ಧಕ್ಕೆ ತಂದಿದೆ. ನರೇಂದ್ರ ಮೋದಿ ಅವರ ಬೆಂಬಲಿತ ವಿವಿಧ ಸಂಘಟನೆಗಳು ಅವರ ಅಭಿಮಾನಿಗಳಿಗೆ ತೀವ್ರ ನೋವು ಉಂಟು ಮಾಡಿದೆ. ಜಗತ್ತೇ ಭಾರತದ ಕಡೆ ನೋಡುವಂತೆ ಮಾಡಿದೆ. ಜಗಮೆಚ್ಚಿದ ಜನನಾಯಕ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಒಂದು ವೇಳೆ ಸಚಿವ ಶಿವರಾಜ ತಂಗಡಗಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿದರೆ ಇನ್ನು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಬಿರಾದಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದರೆ ಪ್ರಧಾನಿ ಮೋದಿ ಅವರ ವಿರುದ್ಧ ಹಗುರವಾಗಿ ನಾಲಿಗೆ ಹರಿಬಿಟ್ಟ ಶಿವರಾಜ ತಂಗಡಗಿ ಅವರಿಗೇ ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರೇವೂರ ಮಾತನಾಡಿ, ಅಬ ಕೀ ಬಾರ್ ಚಾರಸೋ ಘೋಷಣೆದೊಂದಿಗೆ ಮತ್ತೆ ಮೂರನೇ ಬಾರಿ ಪ್ರಧಾನಿ ಆಗಲಿದ್ದಾರೆ. ಇದನ್ನು ಮನಗೊಂಡು ಹತಾಶೆಯಿಂದ ಶಿವರಾಜ ತಂಗಡಗಿ ನಾಲಿಗೆ ಹರಿಬಿಟ್ಟಿದಾರೆ ಎಂದು ಟೀಕಿಸಿದರು.
ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳನಗೌಡ ಪಾಟೀಲ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ರಾಠೋಡ ಹಾಗೂ ರಾಘವೇಂದ್ರ ಕಾಪಸೆ, ರಾಜಕುಮಾರ ಸಗಾಯಿ, ಶಂಕರ ಹೂಗಾರ, ರವಿಚಂದ್ರ ಉಪ್ಪಲದಿನ್ನಿ, ರವಿ ಬಿರಾದಾರ, ಅರುಣ ನಾಯಕ, ಪ್ರೇಮ ಬಿರಾದಾರ, ಜಗದೀಶ ಸುಣಗದ, ರೋಹನ ಆಪ್ಟೆ, ಜ್ಯೋತಿ ಚವಾಣ, ನಗರ ಮಂಡಳಿ ಯುವ ಮೋರ್ಚಾ ಅಧ್ಯಕ್ಷÀ ಪ್ರವೀಣ ವಂದಾಲಮಠ, ಜಿಲ್ಲೆಯ ಎಲ್ಲಾ ಮಂಡಲ ಯುವ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು