ಮೈಸೂರಿನಲ್ಲಿ ಮೊದಲ ದಿನ ಇಬ್ಬರಿಂದ ಉಮೇದುವಾರಿಕೆ
ಸಂಜೆವಾಣಿ ನ್ಯೂಸ್
ಮೈಸೂರು: ಮಾ.29:- ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ರಂಗೇರಿರುವಂತೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾದ ಮೊದಲ ದಿನವೇ ಇಬ್ಬರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಟಿ.ಆರ್. ಸುನೀಲ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್ )ಪಕ್ಷದ ಎಂ.ಎಸ್. ಪ್ರವೀಣ್ ಅವರು ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.